ಬೆಂಗಳೂರು: ಮುಡಾ ಸೈಟ್ (MUDA Site) ಮರಳಿ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಸಿಎಂ ಪತ್ನಿ ಅವರ ನಿರ್ಧಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ( G.Parameshwar) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಅಥವಾ ತೇಜೋವಧೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಸೈಟ್ ಗಳನ್ನು ಮರಳಿ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಅವರ ಪತ್ನಿ ತೆಗೆದುಕೊಂಡಿದ್ದು, ಉತ್ತಮ ನಿರ್ಧಾರ. ತನಿಖೆ ಇರಲಿ ಆಪಾದನೆ ಬಂದ ತಕ್ಷಣ ಅದು ಸತ್ಯ ಆಗುವುದಿಲ್ಲ. ಆದರೆ, ಇದೇ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದು ಅವರ ಅಭಿಪ್ರಾಯ.
ಕಾನೂನು ದೃಷ್ಟಿಯಲ್ಲಿ ಮುಂದೆ ಏನಾಗುತ್ತದೆ ಗೊತ್ತಿಲ್ಲ. ಸರೆಂಡರ್ ಮಾಡಿದ ಮೇಲೆ ಏನಾಗುತ್ತದೆ ಎಂದು ಗೊತ್ತಿಲ್ಲ.
ರಾಜಕೀಯಕ್ಕೆ ಉಪಯೋಗ ಮಾಡುತ್ತಿದ್ದಾರೆ. ನನಗೆ ಮರ್ಯಾದೆ ಮುಖ್ಯ ಅನ್ನುವುದು ಅವರ ಭಾವನೆಯಾಗಿದೆ. ಹೀಗಾಗಿ ಸೈಟ್ ಗಲನ್ನು ನೀಡಿದ್ದಾರೆ. ಆದರೆ, ಮುಡಾ ವಿಚಾರವಂತೂ ಬಿಜೆಪಿಗೆ ರಾಜಕೀಯ ಬಳಕೆಯಾಗುತ್ತಿದೆ ಅಷ್ಟೇ ಎಂದು ಹೇಳಿದ್ದಾರೆ.