ಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಲೈವ್ ವಿಡಿಯೋ ಮಾಡಿ, ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ತಾನು ರಾಜ್ಯಕ್ಕೆ ಬರುವುದಾಗಿ ತಿಳಿಸಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ನಾನು ಎಸ್ ಐಟಿ ಎದುರು ಹಾಜರಾಗಿ ತನಿಖೆಗೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದೇವು. ಅಲ್ಲದೇ, ದೇವೇಗೌಡರು ಎಚ್ಚರಿಕೆ ನೀಡಿದ್ದರು. ಕಾರ್ಯಕರ್ತರ ಮೇಲೆ ನಂಬಿಕೆ ಇದ್ದರೆ ಕೂಡಲೇ ಬರಬೇಕು ಎಂದು ಹೇಳಿದ್ದೆವು. ಸದ್ಯ ನಮ್ಮ ಮನವಿ ಸ್ಪಂದಿಸಿ ಪ್ರಜ್ವಲ್ ಬರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ಎಲ್ಲ ಸತ್ಯಾಸತ್ಯತೆ ತನಿಖೆಯ ಸಂದರ್ಭದಲ್ಲಿ ಬಹಿರಂಗವಾಗಲಿದೆ. ಯಾರ ಯಾರ ಪಾತ್ರ ಏನಿದೆ?. ಈ ಎಲ್ಲದರ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿದ್ದು, ನೋಡೋಣ ಎಲ್ಲಿಗೆ ತಂದು ನಿಲ್ಲಿಸುತ್ತಾರೆ ಎಂದು ಹೇಳಿದರು.