ಚೆನ್ನೈ: ವಿಶ್ವಕಪ್ (World Cup 2023) ಟೂರ್ನಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಆದರೆ, ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಸದ್ಯ ಚೆನ್ನೈನ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅ. 14ರಂದು ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಅನುಮಾನ ಎನ್ನಲಾಗುತ್ತಿದೆ.
ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಪ್ಲೇಟ್ ಲೇಟ್ಸ್ಗಳು ಕಡಿಮೆಯಾಗಿದ್ದು, ವಿಶ್ರಾಂತಿ ನೀಡಲು ಸೆ.11 ರಂದು ಅಫ್ಘಾನಿಸ್ತಾನ ವಿರುದ್ಧ ನಡೆಯುವ ಪಂದ್ಯಕ್ಕೂ ವಿಶ್ರಾಂತಿ ನೀಡಲಾಗಿದೆ. ಇದರ ಮಧ್ಯೆ ಪಾಕ್ ಪಂದ್ಯಕ್ಕೂ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವೈದ್ಯಕೀಯ ತಂಡದ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 1,200ಕ್ಕೂ ಹೆಚ್ಚು ರನ್ ಬಾರಿಸಿ ಫುಲ್ ಫಾರ್ಮ್ನಲ್ಲಿರುವ ಶುಭಮನ್ ಗಿಲ್, ಡೆಂಗ್ಯೂ ಜ್ವರದ ಕಾರಣ ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ (Australia) ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಇಶಾನ್ ಕಿಶನ್ ಗೆ ಅವಕಾಶ ಸಿಕ್ಕಿತ್ತು. ಆದರೆ, ಮೊದಲ ಪಂದ್ಯದಲ್ಲಿ ಮಿಂಚಲು ವಿಫಲವಾಗಿರುವ ಕಿಶನ್, ನಿರಾಶ ಮೂಡಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಆಸೀಸ್ ನೀಡಿದ್ದ 200 ರನ್ಗಳ ಗುರಿ ಬೆನ್ನತ್ತಿದ್ದ ಭಾರತ 2 ಓವರ್ ಗಳಲ್ಲಿಯೇ ಕೇವಲ 2 ರನ್ ಗಳಿಗೆ ಮೂರು ವಿಕೆಟ್ಕಳೆದುಕೊಂಡು ಸಂಕಷ್ಟ ಅನುಭವಿಸಿತ್ತು. ರೋಹಿತ್, ಇಶಾನ್, ಶ್ರೇಯಸ್ ಅಯ್ಯರ್ ಶೂನ್ಯ ಸುತ್ತಿ ಫೆವಲೀಯನ್ ಸೇರಿದ್ದರು. ವಿರಾಟ್ ಕೊಹ್ಲಿ ಹಾಗೂ ಕೆ.ಎಲ್ ರಾಹುಲ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 41.2 ಓವರ್ ಗಳಲ್ಲಿ 201 ರನ್ ಸಿಡಿಸಿ ಗೆಲುವಿನ ನಗೆ ಬೀರುವಂತೆ ಮಾಡಿದರು.