ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಬೇಕು : ಬೈರತಿ ಬಸವರಾಜ್
ದಾವಣಗೆರೆ : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಬೇಕಾ ಬೇಡ್ವಾ ಅನ್ನೋ ಚರ್ಚೆಗಳ ಮಧ್ಯೆ ಸಚಿವ ಬೈರತಿ ಬಸವರಾಜ್, ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಇಳಿಮುಖವಾಗುತ್ತಾ ಬಂದಿದೆ. ಅದರೂ ಕೂಡ ಮತ್ತಷ್ಟು ಸೋಂಕು ಕಡಿಮೆಯಾಗಲು ಇನ್ನು ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಜೂನ್ 7 ರಿಂದ 15ರ ವರಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ರೆ ಅನುಕೂಲವಾಗುತ್ತದೆ ಎಂದರು.
ಇನ್ನು ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎನ್ನುವುದು ನಮ್ಮೆಲ್ಲರ ಅಭಿಪ್ರಾಯ, ಆದರೆ ಸಿಎಂ ಬಿಎಸ್ ಯಡಿಯೂರಪ್ಪನವರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ನಾನು ದಾವಣಗೆರೆಯ ಎಲ್ಲಾ ಶಾಸಕರ ಪರವಾಗಿ ಮನವಿ ಮಾಡುತ್ತೇನೆ. ಎಲ್ಲಾ ಸಚಿವರ ಶಾಸಕರ ಅಭಿಪ್ರಾಯ ಲಾಕ್ ಡೌನ್ ವಿಸ್ತರಣೆ ಮಾಡೋದಾಗಿದೆ. ಈ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ತಾರೆ ಎಂದು ತಿಳಿಸಿದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.