ಬೆಂಗಳೂರು: ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ದೇಶಾದ್ಯಂತ ನಾಳೆ 75ನೇ ಗಣರಾಜ್ಯೋತ್ಸವ (Republic Day Celebration) ಸಂಭ್ರಮ ನಡೆಯಲಿದೆ. ಹೀಗಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಳಿಗ್ಗೆ 9ಕ್ಕೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮಾರಂಭಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಭಾವಚಿತ್ರ ಇಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹನ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.