ಯಾವನದ್ದೋ ಮಾತು ಕೇಳಿ ಮುಷ್ಕರ ಮಾಡುತ್ತಿರುವುದು ಸರಿಯಲ್ಲ : ಬಿಎಸ್ ವೈ
ಬೀದರ್ : ಕಷ್ಟದ ಸಮಯದಲ್ಲೂ 2300 ಕೋಟಿ ರೂಪಾಯಿ ಸಂಬಳವನ್ನ ಸರ್ಕಾರದಿಂದ ಕೊಡಲಾಗಿದೆ. ಯಾವನದ್ದೋ ಮಾತು ಕೇಳಿಕೊಂಡು ಮುಷ್ಕರ ಮಾಡುತ್ತಿರುವುದು ಸರಿಯಲ್ಲ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಸಾರಿಗೆ ನೌಕರರು ಗೌರವಯುತವಾಗಿ ಬಂದು ಬಸ್‍ಗಳನ್ನು ಓಡಿಸಬೇಕು.
ಹಬ್ಬಗಳ ಸಮಯದಲ್ಲಿ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನೆ ಮಾಡುವವವರ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ. ಈಗಾಗಲೇ ಯಾರ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳಲಾಗಿದೆ.
ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸುತ್ತಿರುವ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ, ಇನ್ನಷ್ಟು ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.










