ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಈಗಾಗಲೇ ಎಸ್ ಐಟಿ ವಶದಲ್ಲಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೆ ನೀಡಬಹುದು. ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwa) ಭರವಸೆ ನೀಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಧ್ಯ ರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿದ್ದಾರೆ. ಅವರ ವಿರುದ್ಧ ಬಂಧನದ ವಾರಂಟ್ ಇತ್ತು. ಈಗ ಅವರ ಬಂಧನವಾಗಿದೆ.ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅವರು ತನಿಖೆಗೆ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.
ಪ್ರಜ್ವಲ್ ಹೊರ ದೇಶದಲ್ಲಿದ್ದರು. ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದಾಗುತ್ತೆ ಎಂಬ ಕಾರಣಕ್ಕೆ ಅವರೇ ಬಂದಿದ್ದಾರೆ. ದೇಶದಲ್ಲಿಯೇ ಇದ್ದಿದ್ದರೆ ಇಷ್ಟು ಹೊತ್ತಿಗೆ ಬಂಧನವಾಗಿರುತ್ತಿತ್ತು ಎಂದು ಹೇಳಿದ್ದಾರೆ.