ಈ ನೂತನ ವರ್ಷ(ಸಂವತ್ಸರ) ನಮ್ಮೆಲ್ಲರಿಗೂ ಮಂಗಳವನ್ನುಂಟುಮಾಡಲಿ. ನಮ್ಮ ಜೀವನದಲ್ಲಿ ಒದಗುವ ಕ್ರೋಧವನ್ನು ತಾಯಿ ನಿವಾರಿಸಲಿ. ಆರೋಗ್ಯದ ಜತೆ ಸುಖ ಶಾಂತಿ, ಸಂತೋಷ ಸಂಪತ್ತನ್ನು ಕರುಣಿಸಲಿ. ಈ ಸಂವತ್ಸರದಲಿ ಉತ್ತಮ ಮಳೆಯಾಗಿ ಇಳೆ ತಣಿದು ಸಸ್ಯ ಶ್ಯಾಮಲೆಯಾಗಲಿ. ಗೋ ಸಂಪತ್ತು ಹೆಚ್ಚಲಿ, ಚಂದನ ಅಗರು ವೃದ್ಧಿಸಲಿ. ಪಾಂಡಿತ್ಯ ಪ್ರವರ್ಧಮಾನಕ್ಕೆ ಬರಲಿ. ಕಷ್ಟ ನಷ್ಟದಲ್ಲಿರುವ ಜನರ ಅನಿಷ್ಟ ಗಳು ನಿವಾರಣೆಯಾಗಲಿ. ರೋಗ ರುಜಿನ ತೊಲಗಲಿ, ಸರ್ವರೂ ಆರೋಗ್ಯವಂತರಾಗಲಿ ಎಂದು ಪ್ರಾರ್ಥಿಸುತ್ತೇವೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿ ಆರಾಧಿಸುವ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ಇವರಿಂದ ಜೇವನದಲ್ಲಿ ನೀವು ಅನುಭಿಸುತ್ತಾ ಇರೋ ಸಕಲ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಮ್ಮೆ ಕರೆ ಮಾಡಿರಿ ಈಗಾಗಲೇ ಗುರುಗಳ ಸಲಹೆ ಪಡೆದು ಅನೇಕ ಜನರು ಶಾಶ್ವತ ಪರಿಹಾರ ಪಡೆದುಕೊಂಡು ಸುಖ ಜೀವನ ನಡೆಸುತ್ತಾ ಇದ್ದಾರೆ, ನಿಮ್ಮ ನಿರುದ್ಯೋಗ ಸಮಸ್ಯೆ ಇರ್ಲಿ ಅಥವಾ ಪ್ರೀತಿ ಪ್ರೇಮದ ವಿಚಾರ ಇರ್ಲಿ ಅಥವ ಮನೆಯಲ್ಲಿ ದಾಂಪತ್ಯ ಸಲಹೆಗಳು ಅತ್ತೆ ಸೊಸೆ ಕಿರಿ ಕಿರಿ ಇನ್ನು ಗುಪ್ತ ಸಮಸ್ಯೆಗಳನ್ನು ಸಹ ಬಲಿಷ್ಠ ಶ್ರೀ ಕಟೀಲು ರಕ್ತೇಶ್ವರಿ ದೇವಿ ಪೂಜೆಗಳಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ಎಲ್ಲ ಸಮಸ್ಯೆಗಳು ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಶಾಶ್ವತ ಪರಿಹಾರ ಫೋನ್ ಮುಖಾಂತರ ಮಾಡಲಾಗುವುದು ಒಮ್ಮೆ ಕರೆ ಮಾಡಿರಿ 8548998564
ಯುಗಾದಿ ಪುರಾಣದ ಪ್ರಕಾರ ಬ್ರಹ್ಮದೇವರು ಮೊದಲನೇ ಯುಗವಾದ ಕೃತ ಯುಗವನ್ನು ಆರಂಭಿಸಿದ ದಿನ. ಹಾಗಾಗಿ ಈ ಯುಗಾದಿ ದಿನದಿಂದಲೇ ಚಾಂದ್ರಮಾನ ಪದ್ಧತಿಯ ಕಾಲಗಣನೆ ಆರಂಭವಾಗುತ್ತದೆ.
ಚಂದ್ರ ಭೂಮಿಯ ಸುತ್ತ ಸುತ್ತುವ ವೇಗದ ಗತಿಯನ್ನು ಆಧರಿಸಿ ಚಾಂದ್ರಮಾನ ಪದ್ಧತಿಯನ್ನು ರೂಪಿಸಲಾಗಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ಒಂದು ವರ್ಷದಲ್ಲಿ ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ , ಶ್ರಾವಣ, ಭಾದ್ರಪದ, ಆಶ್ವಯುಜ, ಕಾರ್ತಿಕ, ಮಾರ್ಗಶಿರ, ಪುಷ್ಯ, ಮಾಘ ಹಾಗೂ ಫಾಲ್ಗುಣ ಎಂಬ 12 ಮಾಸ (ತಿಂಗಳು) ಗಳು.
ಪ್ರತಿ ತಿಂಗಳು ತಲಾ 15 ದಿನಗಳಂತೆ ಅಮಾವಾಸ್ಯೆಯಿಂದ ಹುಣ್ಣಿಮೆವರೆಗೆ ಶುಕ್ಲ ಹಾಗೂ ಹುಣ್ಣಿಮೆಯಿಂದ ಅಮಾವಾಸ್ಯೆಯವರೆಗೆ ಕೃಷ್ಣ ಎಂಬ ಎರಡು ಪಕ್ಷಗಳು.
ಈ ಪಕ್ಷಗಳಲ್ಲಿ ಪಾಡ್ಯ, ಬಿದಿಗೆ, ತದಿಗೆ, ಚೌತಿ, ಪಂಚಮಿ, ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಚತುರ್ದಶಿಯ ನಂತರ ಶುಕ್ಲ ಪಕ್ಷದಲ್ಲಿ 15ನೇ ದಿನ ಹುಣ್ಣಿಮೆ ಮತ್ತು ಕೃಷ್ಣಪಕ್ಷದ 15ನೇ ದಿನ ಅಮಾವಾಸ್ಯೆ ಎಂಬ ತಲಾ 15 ತಿಥಿಗಳಿವೆ. ಇದು ಚಾಂದ್ರಮಾನ ಪದ್ಧತಿ.
ಚಾಂದ್ರಮಾನ ಪದ್ಧತಿಯ ವರ್ಷ (ಸಂವತ್ಸರ)ದ ಮೊದಲ ದಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದ ದಿನ. ಹಾಗಾಗಿ ಈ ಪದ್ಧತಿಯನ್ನು ಅನುಸರಿಸುವವರಿಗೆ ಈ ದಿನ ಯುಗಾದಿ ಯಾಗಿದ್ದು, ಚಾಂದ್ರಮಾನ ಯುಗಾದಿ ಎಂದು ಕರೆಯಲಾಗುತ್ತದೆ.
ಇದೇ ರೀತಿ ಸೂರ್ಯನ ಗತಿಯನ್ನು ಆಧರಿಸಿ ಸೌರಮಾನ ಪದ್ಧತಿಯನ್ನು ರೂಪಿಸಲಾಗಿದೆ. ಸೂರ್ಯ ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನಸ್ಸು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳಲ್ಲಿ ಒಂದೊಂದು ತಿಂಗಳು ಇರುವುದರಿಂದ ಈ ಪದ್ಧತಿ ಅನುಸರಣೆಯನ್ನು ಸೌರಮಾನ ಎನ್ನಲಾಗುತ್ತದೆ.
. ಹಾಗಾಗಿ ಸೂರ್ಯ ಮೇಷ ರಾಶಿಗೆ ಪ್ರವೇಶಿಸುವ ಸಂಕ್ರಮಣ ದಿನದ ಮರು ದಿನವನ್ನು ಸೌರಮಾನ ಯುಗಾದಿ ಎನ್ನಲಾಗುತ್ತದೆ.
ಭಾರತದಲ್ಲಿ ಈ ಎರಡೂ ಪದ್ಧತಿಯನ್ನು ಅನುಸರಿಸಲಾಗುತ್ತದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಸೌರಮಾನ ಪದ್ಧತಿ ಆಚರಿಸಲಾಗುತ್ತದೆ. ಉಳಿದಂತೆ ರಾಜ್ಯದ ಘಟ್ಟದ ಮೇಲಿನವರು, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಚಾಂದ್ರಮಾನ ಪದ್ಧತಿ ಆಚರಿಸಲಾಗುತ್ತದೆ.
09-04-2024ರಂದು ಮಂಗಳವಾರ ನಮಗೆಲ್ಲಾ ಚಾಂದ್ರಮಾನ ಯುಗಾದಿ ಈ ದಿನ ಮುಂಜಾನೆ ಎದ್ದು, ಹೊಸ ವರ್ಷ ಹರುಷ ತರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿ. ಚಾಂದ್ರಮಾನ ಯುಗಾದಿಗೆ ಮೂಲವಾದ ಚಂದ್ರನನ್ನು ಸ್ಮರಿಸಿ. ನಂತರ ಎಣ್ಣೆ ನೀರು ಸ್ನಾನ ಮಾಡಿ. ಹಬ್ಬದ ಅಂಗವಾಗಿ ಮನೆ ಮುಂದೆ ಸುಂದರ ರಂಗೋಲಿ ಬಿಡಿಸಿ, ಬಾಗಿಲುಗಳಿಗೆ ಮಾವಿನ ತಳಿರಿನ ತೋರಣ ಕಟ್ಟಿ, ಬೇವಿನ ಸೊಪ್ಪು ಸಿಕ್ಕಿಸಿ. ಶುದ್ಧ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ. ದೇವರಿಗೆ ಯಥಾಶಕ್ತಿ ಭಕ್ತಿಯಿಂದ ಪೂಜೆ ಸಲ್ಲಿಸಿ, ಮನೆ ಮಂದಿಯೊಂದಿಗೆ ದೇವರಿಗೆ ಸಮರ್ಪಿಸಿದ ಬೇವು ಬೆಲ್ಲವನ್ನು ಸ್ವೀಕರಿಸಿ. ಸಂಭ್ರಮದಿಂದ ಭೋಜನ ಮಾಡುವುದು.
ಋತುಗಳಲ್ಲಿ ಅತ್ಯಂತ ಶ್ರೇಷ್ಠವಾದ ವಸಂತ ಋತು ಆಗಮನದ ದಿನವಿದು. ಪ್ರಕೃತಿಯಲ್ಲಿ ಮರಗಿಡ ಚಿಗುರಿ ನಳನಳಿಸುವ ಕಾಲವಿದು. ಇಂತಹ ಸಂಭ್ರಮದ ಹಬ್ಬವನ್ನು ಸಡಗರದಿಂದ ಆಚರಿಸೋಣ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿ ಆರಾಧಿಸುವ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ಇವರಿಂದ ಜೇವನದಲ್ಲಿ ನೀವು ಅನುಭಿಸುತ್ತಾ ಇರೋ ಸಕಲ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಮ್ಮೆ ಕರೆ ಮಾಡಿರಿ ಈಗಾಗಲೇ ಗುರುಗಳ ಸಲಹೆ ಪಡೆದು ಅನೇಕ ಜನರು ಶಾಶ್ವತ ಪರಿಹಾರ ಪಡೆದುಕೊಂಡು ಸುಖ ಜೀವನ ನಡೆಸುತ್ತಾ ಇದ್ದಾರೆ, ನಿಮ್ಮ ನಿರುದ್ಯೋಗ ಸಮಸ್ಯೆ ಇರ್ಲಿ ಅಥವಾ ಪ್ರೀತಿ ಪ್ರೇಮದ ವಿಚಾರ ಇರ್ಲಿ ಅಥವ ಮನೆಯಲ್ಲಿ ದಾಂಪತ್ಯ ಸಲಹೆಗಳು ಅತ್ತೆ ಸೊಸೆ ಕಿರಿ ಕಿರಿ ಇನ್ನು ಗುಪ್ತ ಸಮಸ್ಯೆಗಳನ್ನು ಸಹ ಬಲಿಷ್ಠ ಶ್ರೀ ಕಟೀಲು ರಕ್ತೇಶ್ವರಿ ದೇವಿ ಪೂಜೆಗಳಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ಎಲ್ಲ ಸಮಸ್ಯೆಗಳು ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಶಾಶ್ವತ ಪರಿಹಾರ ಫೋನ್ ಮುಖಾಂತರ ಮಾಡಲಾಗುವುದು ಒಮ್ಮೆ ಕರೆ ಮಾಡಿರಿ 8548998564
ಹಬ್ಬದ ದಿನ ಬೇವು ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಈ ಶ್ಲೋಕವನ್ನು ಹೇಳಿಕೊಳ್ಳಿ.
ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|
ಸರ್ವಾರಿಷ್ಟ ವಿನಾಶಾಯ ನಿಂಬಕಂ ದಳ ಭಕ್ಷಣಂ||
( ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿ ಬೇವು ಬೆಲ್ಲ ಸೇವಿಸುತ್ತೇನೆ ).
ಬೇವು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ
ಶತ್ರುತ್ವ ಬಿಟ್ಟು ಪ್ರೀತಿಯ ಸ್ನೇಹತ್ವ ಬೆಳೆಸೋಣ
ಮತ್ತೊಮ್ಮೆ ಯುಗಾದಿ ಹಬ್ಬದ ಶುಭಾಶಯಗಳು