ನಿನ್ನೆಯಷ್ಟೇ ಬಿಗ್ ಬಾಸ್ (Bigg Boss Kannada) ಮನೆಯಿಂದ ಪೊಲೀಸರ ಅತಿಥಿಯಾಗಿದ್ದ ವರ್ತೂರ್ ಸಂತೋಷ್ (Varthuru Santhosh) ಹಲವು ಮಾಹಿತಿಗಳನ್ನು ಅರಣ್ಯ ಅಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದಾರೆ.
ತನ್ನ ಬಳಿ ಇರುವುದು ಒರಿಜಿನಲ್ ಹುಲಿ ಉಗುರು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅರಣ್ಯ ಅಧಿಕಾರಿಗಳು ಹುಲಿ ಉಗುರಿನ ಮೂಲ ಹುಡುಕುತ್ತಿದ್ದಾರೆ. ಸಂತೋಷ್ ಅವರು ಯಾರಿಂದ ಹುಲಿ ಉಗುರು ಪಡೆದುಕೊಂಡರು ಎನ್ನವ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದು ನಾನ್ ಬೇಲ್ ಬೆಲ್ ಕೇಸ್ ಆಗಿರುವುದರಿಂದ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅವರನ್ನು ಪ್ರೊಡ್ಯೂಸ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅವರ ಬಳಿ ಇರುವುದು ಒರಿಜನ್ ಹುಲಿ ಉಗುರು ಎಂದು ಕೋರ್ಟ್ ನಲ್ಲಿ ಸಾಬೀತು ಆದರೆ, ಮೂರರಿಂದ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದು ಎನ್ನಲಾಗುತ್ತಿದೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಬಂಧಿಯಾಗಿದ್ದು, ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ವಿಚಾರಣೆ ನಡೆಯುತ್ತಿದೆ.








