ಚುನಾವಣೆ ಸಂದರಭದಲ್ಲಿ ಕಾಂಗ್ರೆಸ್ ಮುಖಂಡರುಗಳ ಮೇಲಿನ ಐಟಿ ದಾಳಿ ಮುಂದುವರೆದಿದೆ. ಇತ್ತೀಚೆಗಷ್ಟೇ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಆಪ್ತರ ಮನೆಯ ಮೇಲೆ ದಾಳಿ ನಡೆದಿತ್ತು. ಇದರ ಬೆನ್ನಲ್ಲಿಯೇ ಮತ್ತೆ ಕೆಲವು ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ನಡೆದಿದೆ.
ಶಾಸಕ ಪ್ರಿಯಾಂಕ್ ಖರ್ಗೆ ಅವರ ಆಪ್ತ ಕೈ ಕಾರ್ಯಕರ್ತ ಅರವಿಂದ ಚವ್ಹಾಣ್ ಮನೆ ಮೇಲೆ ಐಟಿ ಅಧಿಕಾರಿಗಳು(IT) ದಾಳಿ ನಡೆಸಿದ್ದಾರೆ. ಈ ವಿಷಯವಾಗಿ ಪ್ರತಿಕ್ರಿಯಿಸಿದ ಶಾಸಕ ಪ್ರಿಯಾಂಕ್ ಖರ್ಗೆ, ಅರವಿಂದ್ ಅವರು ಕಳೆದ ಎರಡು ವಾರಗಳ ಹಿಂದೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಎರಡು ವಾರಗಳಲ್ಲಿಯೇ ಅವರು ಅಕ್ರಮ ಆಸ್ತಿ ಗಳಿಸಿದರಾ? ಎಂದು ಪ್ರಶ್ನಿಸಿದ ಅವರು, ಬಿಜೆಪಿಯಲ್ಲಿದ್ದಾಗ ಅರವಿಂದ್ ಚವ್ಹಾಣ್ ಚನ್ನಾಗಿದ್ದರಾ? ಆ ಸಂದರ್ಭದಲ್ಲಿ ಏಕೆ ಅವರ ಮೇಲೆ ಐಟಿ ದಾಳಿ ನಡೆಯಲಿಲ್ಲ.
ಈಗ ಕಾಂಗ್ರೆಸ್ ಸೇರಿದ ಮೇಲೆ ಅವರ ಮೇಲೆ ಐಟಿ ದಾಳಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಹೆದರಿಸಲು ಬಿಜೆಪ ಈ ರೀತಿ ಮಾಡುತ್ತಿದೆ. ಕಳೆದ 10 ವರ್ಷಗಳಲ್ಲಿ ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿಯ ಈ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದುಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.