ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆಯೇ ದಾಳಿ ನಡೆಸಲಾಗಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ನಿವಾಸದ ಮೇಲೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿ ಇರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ. ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಅವರ ಬರುವಿಕೆಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. 2018ರ ಚುನಾವಣೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.








