ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್ MLA Jameer Ahmed saaksha tv
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದಡಿ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ ನಡೆದಿದೆ.
ಜಮೀರ್ ಅವರ ಬೆಂಗಳೂರಿನಲ್ಲಿರುವ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮತ್ತು ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಮೀರ್ ಅವರ ಬೆಂಗಳೂರಿ ಕಟೋಂನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ ಹೊಸ ನಿವಾಸ ಮತ್ತು ಕಲಾಸಿಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.