ಬೆಂಗಳೂರು: ಹಿರಿಯ ನಾಗರಿಕರ (Senior Citizens) ಸಾಧನೆಗಳು ಯುವಜನರಿಗೆ ಸ್ಪೂರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ವಿಶ್ವಹಿರಿಯ ನಾಗರೀಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ಘನತೆಯ ಬಾಳಿನೊಂದಿಗೆ ವಯೋಪಕ್ವತೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಣೆ ಮಡಾಲಾಗುತ್ತಿದೆ. ನಾವೆಲ್ಲ ಹಿರಿಯರನ್ನು ಗೌರವದಿಂದ ಕಾಣಬೇಕು.
ಅವರ ಅನುಭವಗಳನ್ನು ಗೌರವಿಸಿ, ಪಾಲಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ಬಾಲ್ಯ, ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ದೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ. ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯವಿದ್ದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ.
2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91 ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಇತ್ತೀಚಿನ ದಿನಮಾನದಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲೆಸಿ, ತಂದೆ-ತಾಯಿಯನ್ನು ಪೋಷಿಸಲು ಸಾಧ್ಯವಾಗದೇ ವೃದ್ಧಾಶ್ರಮಗಳಿಗೆ ಸೇರಿಸುತ್ತಾರೆ ಎಂದಿದ್ದಾರೆ.