ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿ ಪ್ರಕರಣಗಳನ್ನು ದಾಖಲಿಸದಂತೆ ನಿರ್ದೇಶಿಸಿದ ಕೇಂದ್ರ ಗೃಹ ಸಚಿವಾಲಯ
ನವದೆಹಲಿ : ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿ ಪ್ರಕರಣಗಳನ್ನು ದಾಖಲಿಸದಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. ಹೀಗಾಗಿ ರದ್ದುಗೊಳಿಸಲಾದ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸದಿರಲು ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಫ್ರೆಂಚ್ ಸುದ್ದಿ ಸಂಸ್ಥೆಗಳೊಂದಿಗೆ ಸಂಘರ್ಷ – ಗೂಗಲ್ ಗೆ 4,408 ಕೋಟಿ ರೂ. ದಂಡ
ಇನ್ನೂ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ಅನುರಿಸರಿಸಲು ಸಂಸ್ಥೆಗಳನ್ನು ಜಾಗೃತಗೊಳಿಸುವಂತೆ ಕೂಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಐಟಿ ಕಾಯ್ದೆ ಸೆಕ್ಷನ್ 66ಎ ಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದ 6 ವರ್ಷದ ಬಳಿಕವೂ ಈ ಸೆಕ್ಷನ್ ಅಡಿಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವ ಕುರಿತು ಅಚ್ಚರಿ ಮತ್ತು ಆತಂಕ ವ್ಯಕ್ತಪಡಿಸಿತ್ತು. ಇದಾದ ಕೆಲ ದಿನಗಳ ಅಂತರದಲ್ಲೇ ಕೇಂದ್ರ ಗೃಹ ಸಚಿವಾಲಯ ಈ ಮಹತ್ತರ ನಿರ್ದೇಶನ ನೀಡಿದೆ.








