ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾಮೈದನೊಬ್ಬ ಭಾವನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಜಿಲ್ಲೆಯ ಚಿಕ್ಕೋಡಿಯ ವಿದ್ಯಾನಗರದಲ್ಲಿ ನಡೆದಿದೆ.
ನಿವೃತ್ತ ಯೋಧ ಈರಗೌಡ ಟೋಪಗೋಳ(45) ಹತ್ಯೆಗೀಡಾದ ಭಾವ ಎನ್ನಲಾಗಿದೆ. ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಈರಗೌಡ ಟೋಪಗೋಳ ಅವರು ಮೂಲತಃ ಜೈನಾಪುರ ಗ್ರಾಮದವರಾಗಿದ್ದು, ನಿವೃತ್ತಿಯಾದ ನಂತರ ಕ್ರಷರ್ ನಡೆಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈರಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.