ರಾಯ್ಪುರ: ದೇಶದ ಹಲವೆಡೆ ವಿಧಾನಸಭೆ ಚುನಾವಣೆ ಜರಗುತ್ತಿದ್ದರೆ, ಲೋಕಸಭೆ ತಯಾರಿ ಕೂಡ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಯೋಧ್ಯೆ ರಾಮಮಂದಿರದ (Ayodhya RamaMandir) ಕ್ರೆಡಿಟ್ ಪಾಲಿಟಿಕ್ಸ್ ಆರಂಭವಾಗಿದೆ.
ಛತ್ತೀಸ್ಘಡದ ಬಿಶ್ರಮ್ಪುರ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನನ್ನಿಂದಾಗಿಯೇ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ಆದಿವಾಸಿಗಳು ಕಾಂಗ್ರೆಸ್ ಕಣ್ಣಿಗೆ ಬಿದ್ದಿರಲಿಲ್ಲ. ನಿಮ್ಮವರ ಬಗ್ಗೆ ಅವರು ತಲೆ ಕೆಡಿಸಿಕೊಂಡಿರಲಿಲ್ಲ. ಆದಿವಾಸಿಗಳ ಅಭಿವೃದ್ಧಿಗೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತದೆ. ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಬಹುದೆಂದು ನೀವು ಎಂದಾದರೂ ಊಹಿಸಿದ್ದಿರೇ ಎಂದು ಮೋದಿ ಜನರನ್ನು ಪ್ರಶ್ನಿಸಿದ್ದಾರೆ.
ಛತ್ತೀಸ್ ಗಢದಲ್ಲಿ ನಡೆಯುತ್ತಿರುವ ಹಿಂಸಾಚಾರಗಳನ್ನು ತಡೆಯುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ. ಮಾನವ ಕಳ್ಳಸಾಗಣೆ, ಮಾದಕ ವಸ್ತು ವ್ಯಾಪಾರ ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.