ITBP SI recruitment 2022 : PUC ಪಾಸಾದವರಿಗೆ ಉದ್ಯೋಗಾವಕಾಶ
ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗಾವಕಾಶ
recruitment.itbpolice.nic.in ಗೆ ಭೇಟಿ ನೀಡಿ
ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿ. ಸೆಪ್ಟಂಬರ್ 15
ದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಗುಡ್ ನ್ಯೂಸ್ ನೀಡಿದೆ.
ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಐಟಿಬಿಪಿ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಐಟಿಬಿಪಿಯ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಮೂಲಕ ಐಟಿಬಿಪಿ 18 ಹುದ್ದೆಗಳನ್ನು ಭರ್ತಿ ಮಾಡಲಿದೆ.
ಇದಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವ ವಿದ್ಯಾಲಯದಿಂದ ಪಿಯುಸಿ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು.
ಜೊತೆಗೆ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
21 ವರ್ಷದಿಂದ 30 ವರ್ಷಗಳ ನಡುವೆ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟಂಬರ್ 15.








