ಸಮ್ಮತಿಯ ದೈಹಿಕ ಸಂಪರ್ಕ ಅಪರಾಧ ಅಲ್ಲ : ಮಾಧುಸ್ವಾಮಿ
ಉಡುಪಿ: ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ ಎಂದು ರಮೇಶ್ ಜಾರಕಿಹೊಳಿ ಪರ ಸಚಿವ ಜೆ.ಸಿ ಮಾಧುಸ್ವಾಮಿ ಬ್ಯಾಟ್ ಬೀಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡುತ್ತಾ, ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಡಿ ಪ್ರಕರಣಕ್ಕ ಸಂಬಂಧಿಸಿದಂತೆ ನಾನು ತಿಳಿದ ಸಾಮಾನ್ಯ ಜ್ಞಾನದ ಪ್ರಕಾರ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ. ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ ಎಂದು ಹೇಳಿದರು.
ಇನ್ನು ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ. ಎಲ್ಲವನ್ನು ಎದುರಿಸಲೇಬೇಕು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರ ಸಾಧ್ಯವಿಲ್ಲ. ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.