ಚಿತ್ರದುರ್ಗ: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ನಡೆಯುತ್ತಿದ್ದು ಖಂಡಿಸಿ ಜ.4ಕ್ಕೆ ಕಲಬುರಗಿಯಲ್ಲಿ (Kalaburagi) ಬಿಜೆಪಿಯಿಂದ (BJP) ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್ನಲ್ಲಿ (Bidar) ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಕೈವಾಡವಿದೆ. ಡೆತ್ ನೋಟ್ನಲ್ಲಿ ಇನ್ನೂ ನಾಲ್ವರಿಗೆ ಸುಪಾರಿ ಬಗ್ಗೆ ಪ್ರಸ್ತಾಪವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಸ್ಗೆ ಸುಪಾರಿ ಬಗ್ಗೆ ಮಾಹಿತಿ ಹಿನ್ನೆಲೆ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಗೃಹ ಸಚಿವರಿಗೇ ತಿರುಗುಬಾಣವಾಯ್ತು ಸೋಷಿಯಲ್ ಮೀಡಿಯಾ ಪೋಸ್ಟ್: ಉದ್ದೇಶಪೂರ್ವಕ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್
ಬೆಂಗಳೂರು: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಚುಕ್ಕಾಣಿ ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧವೇ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಲಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ...








