J.P.Nadda | ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಬದ್ಧ
ನವದೆಹಲಿ : ಹಿಮಾಚಲ ಪ್ರದೇಶ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ.
ಶಿಮ್ಲಾದಲ್ಲಿ ನಡೆದ ಪಕ್ಷದ ಸಾರ್ವಜನಿಕ ರ್‍ಯಾಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಜೆ.ಪಿ ನಡ್ಡಾ, ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ- U C C ಜಾರಿಗೊಳಿಸಲು ಪಕ್ಷ ಬದ್ಧ ಎಂದರು.
ಇದೆ ವೇಳೆ, ಕೇಂದ್ರ ಸಚಿವ ಮತ್ತು ಪಕ್ಷದ ನಾಯಕ ಅನುರಾಗ್ ಸಿಂಗ್ ಠಾಕೂರ್, ಮುಖ್ಯಮಂತ್ರಿ ಜಯರಾಮ್ ಠಾಕೂರ್ ಮತ್ತಿತರರು ಭಾಗವಹಿಸಿದ್ದರು.







