ರಾಜಸ್ಥಾನ ಪ್ರೀಮಿಯರ್ ಲೀಗ್ ಉದ್ಘಾಟನೆ ಕಾರ್ಯಕ್ರಮದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಭರ್ಜರಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ಶ್ರೀಲಂಕಾ ಮೂಲದವರು. ಬಾಲಿವುಡ್ ಅವರ ವೃತ್ತಿ ಜೀವನದ ದಿಕ್ಕನ್ನು ಬದಲಿಸಿದೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ.
ಡ್ಯಾನ್ಸ್ನ ಜಾಕ್ವೆಲಿನ್ ಫರ್ನಾಂಡಿಸ್ ಅದ್ಭುತವಾಗಿ ಮಾಡುತ್ತಾರೆ. ಜಾಕ್ವೆಲಿನ್ಗೆ ಇನ್ಸ್ಟಾಗ್ರಾಮ್ನಲ್ಲಿ 6.7 ಕೋಟಿ ಹಿಂಬಾಲಕರಿದ್ದಾರೆ. ಅವರ ಅಭಿಮಾನಿವರ್ಗ ಹಿರಿದಾಗುತ್ತಲೇ ಇದೆ.ಇವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ‘ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜೊತೆ ಆಪ್ತತೆ ಹೊಂದಿದ್ದ ಕಾರಣಕ್ಕೆ ಜಾಕ್ವೆಲಿನ್ ಸಂಕಷ್ಟ ಅನುಭವಿಸಿದ್ದರು.