jadeja | ವಿಂಡೀಸ್ ವಿರುದ್ಧ ODI ಸರಣಿ | ಟೀಂ ಇಂಡಿಯಾಗೆ ಬಿಗ್ ಶಾಕ್ ?
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗುವ ಸಾಧ್ಯತೆಗಳಿದೆ.
ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಕಾರಣ ಏಕದಿನ ಸರಣಿಯಿಂದ ದೂರವಾಗುವ ಸಾಧ್ಯತೆಗಳಿವೆ.
ರೆಗ್ಯುಲರ್ ಕ್ಯಾಪ್ಟನ್ ರೋಹಿತ್ ಶರ್ಮಾ, ವೈಸ್ ಕ್ಯಾಪ್ಟನ್ ಕೆ.ಎಲ್.ರಾಹುಲ್ ಗೆ ಏಕದಿನ ದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಹೀಗಾಗಿ ಶಿಖರ್ ಧವನ್ ಗೆ ನಾಯಕತ್ವ, ಜಡೇಜಾಗೆ ವೈಸ್ ಕ್ಯಾಪ್ಟನ್ ಜವಾಬ್ದಾರಿ ನೀಡಲಾಗಿದೆ.
ಆದ್ರೆ ಇದೀಗ ರವೀಂದ್ರ ಜಡೇಜಾಗೆ ಇಂಜೂರಿಯಾಗಿದೆ. ಹೀಗಾಗಿ ಅವರು ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹಿಂದೆ ಸರಿಯುವ ಸಾಧ್ಯತೆಗಳಿವೆ.

ಆದ್ರೆ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ 20 ಸರಣಿಗೆ ಜಡೇಜಾ ತಂಡ ಸೇರಿಕೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ.
ಪೋಟ್ಸ್ ಆಫ್ ಸ್ಪೇನ್ ನಲ್ಲಿ ಇಂದಿನಿಂದ ಇಂಡೋ – ವಿಂಡೀಸ್ ಕಾಳಗ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೀಂ ಇಂಡಿಯಾ ಏಕದಿನ ತಂಡ
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಂ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಠಾಕೂರ್, ಯಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಾದ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.








