ಬಿಜೆಪಿಯನ್ನ ಅಲ್ಲಾಡಿಸೋಕೆ ಆಗಲ್ಲವಂತೆ : ಶೆಟ್ಟರ್ ಹೇಳಿದ್ದು jagadish shettar
ಧಾರವಾಡ : ಬಿಜೆಪಿಯನ್ನ ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. jagadish shettar
ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಅನ್ನೋ ಸಿದ್ದರಾಮಯ್ಯ siddaramaiah ಹೇಳಿಕೆಗೆ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರು ಸುಮ್ಮನೆ ಹುಳ ಬಿಡುವ ಕೆಲಸ ಮಾಡ್ತಿದ್ದಾರೆ.
ಅದು ನಿಜವಾಗಿದ್ದರೆ, ಧೈರ್ಯವಿದ್ದರೆ ಹೆಸರು ಬಹಿರಂಗ ಪಡಿಸಿಲಿ ಎಂದು ವಿಪಕ್ಷ ನಾಯಕರಿಗೆ ಸವಾಲು ಹಾಕಿದರು.
ಇನ್ನು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರೋದಕ್ಕೆ ಹೊರಟಿಸುವವರು ಮೂರ್ಖರು ಎಂದ ಶೆಟ್ಟರ್, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ದುರ್ಬಿನ್ ಹಾಕಿಕೊಂಡು ಹುಡುಕಬೇಕಿದೆ ಎಂದು ವ್ಯಂಗ್ಯವಾಡಿದರು.
ನಿನ್ನೆ ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸ್ವಾಗತ ಎಂದು ಬೇಷರತ್ ಆಹ್ವಾನಿಸಿದರು