ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆ ತರಲು ಮುಂದಾದ ಜಗನ್..!
ವಿಜಯವಾಡ : ಆಂಧ್ರ ಪ್ರದೇಶದ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರಲು ಸಿಎಂ ಜಗನ್ ಮೋಹನ್ ರೆಡ್ಡಿ 16 ಹೆಲ್ತ್ ಹಬ್ ಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.
ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಮತ್ತು ಪ್ರಮುಖ ಖಾಸಗಿ ಆಸ್ಪತ್ರಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನ ಹಮ್ಮಿಕೊಳ್ಳಲಾಗಿದೆ.
ಇದಕ್ಕಾಗಿ ರಾಜ್ಯಾದ್ಯಂತ ಕಾಪೆರ್Çರೇಟ್ ಆಸ್ಪತ್ರೆಗಳನ್ನು ನಿರ್ಮಿಸಲು ಮುಂದೆ ಬಂದವರಿಗೆ 5 ಎಕರೆ ಜಾಗವನ್ನು ಉಚಿತವಾಗಿ ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ನಮ್ಮ ರಾಜ್ಯದ ಜನತೆ ಉತ್ತಮ ವೈದ್ಯಕೀಯ ಸೌಲಭ್ಯಗಳಿಗಾಗಿ ಹೈದರಾಬಾದ್, ಬೆಂಗಳೂರು, ಚೆನ್ನೈ ಮುಂತಾದ ನಗರಗಳನ್ನು ಆಶ್ರಯಿಸಿದ್ದಾರೆ.
ಇದನ್ನು ತಪ್ಪಿಸಿ, ಆಂಧ್ರದ ಜನತೆಗೆ ಇಲ್ಲಿಯೇ ಉತ್ತಮ ವೈದ್ಯಕೀಯ ಸೌಲಭ್ಯ ದೊರಕಿಸಿಕೊಡುವ ಯೋಜನೆಯನ್ನು ರೂಪಿಸಲಾಗಿದೆ.
ಇದಕ್ಕಾಗಿ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಲ್ತ್ ಹಬ್ ಗಳನ್ನು ಸ್ಥಾಪಿಸಲು ಖಾಸಗಿ ವೈದ್ಯಕೀಯ ಸಂಸ್ಥೆಗನ್ನು ಆಹ್ವಾನಿಸುತ್ತಿದ್ದೇವೆ.
ಯಾರು ವೈದ್ಯಕೀಯ ಕ್ಷೇತ್ರದಲ್ಲಿ ಕನಿಷ್ಠ 100 ಕೋಟಿ ರೂಪಾಯಿ ಹೂಡಿಕೆ ಮಾಡಲು ತಯಾರಿದ್ದಾರೋ, ಅವರಿಗೆ 5 ಎಕರೆ ಭೂಮಿಯನ್ನು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.