ನವದೆಹಲಿ: ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಈಗ ಮರಳಿ ಗೂಡು ಸೇರಿದ್ದಾರೆ.
ಕಾಂಗ್ರೆಸ್‌ಗೆ (Congress) ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿರುವ ಶೆಟ್ಟರ್, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಬಿಜೆಪಿಗೆ ಮರಳಿ ಬರುವಂತೆ ಯಡಿಯೂರಪ್ಪ ಆಹ್ವಾನ ನೀಡಿದ್ದರು.