ಟ್ವೀಟ್ ಡಿಲೀಟ್ ಬಗ್ಗೆ ಸ್ವಷ್ಟನೆ ಕೊಟ್ಟು , ಮಗನ ಅಪಘಾತದ ಬಗ್ಗೆ ಭಾವಕರಾಗಿ ಟ್ವೀಟ್ ಮಾಡಿದ ಜಗ್ಗೇಶ್
ಸ್ಯಾಂಡಲ್ ವುಡ್ ನ ಸ್ಟಾರ್ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಅವರು ಚಲಾಯಿಸುತ್ತಿದ್ದ ಕಾರು ನಿನ್ನೆ ಜುಲೈ 1 ರಂದು ಅಪಗಾತಕ್ಕೆ ಈಡಾಗಿತ್ತು.. ಆದ್ರೆ ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಿಂದ ಬಚಾವಾಗಿದ್ದಾರೆ.. ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತ ನಡೆದಿತ್ತು..
ನಿನ್ನೆ ಈ ಬಗ್ಗೆ ಟ್ವೀಟ್ ಮಾಡಿದ್ದ ಜಗ್ಗೇಶ್ ಅವರು ‘ಗುರು ರಾಯರನ್ನು ಸ್ಮರಿಸಿದ್ದಾರೆ. ಟ್ವೀಟ್ ನಲ್ಲಿ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ. ರಾಯರು ನನ್ನ ಜೊತೆ ಸದಾ ಇರುತ್ತಾರೆ ಇದ್ದಾರೆ.
ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ರಾಯರ ನಂಬಿ ಕೆಟ್ಟವರಿಲ್ಲಾ’ ಎಂದಿದ್ದರು.. ಆದ್ರೆ ಈ ಟ್ವೀಟ್ ಅನ್ನ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ದರು.. ಇದ್ರಿಂದಾಗಿ ಸಾಕಷ್ಟು ಅನುಮಾನಗಳು ಗೊಂದಲುಗಳು ಹುಟ್ಟಿಕೊಂಡಿತ್ತು..
ಇದೀಗ ಇಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು ‘ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
‘ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ ಮತ್ತೊಂದು ಟ್ವೀಟ್ ನಲ್ಲಿ ‘ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. ‘ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ’ ಎಂದು ಹೇಳಿದ್ದಾರೆ.








