ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೆಲವು ವಾರಗಳ ಕಾಲ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಇತ್ತೀಚೆಗೆ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಅವರು ಗುಣಮುಖರಾಗಿದ್ದಾರೆ. ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ ವಿನಿತ್ ಸೂರಿ, ಸದ್ಗುರುಗಳ ಮೆದುಳು, ದೇಹ ಮತ್ತು ಪ್ರಮುಖ ನಿಯತಾಂಕಗಳು ಸಾಮಾನ್ಯ ಮಟ್ಟಕ್ಕೆ ಸುಧಾರಿಸಿದೆ ಎಂದು ತಿಳಿಸಿದ್ದಾರೆ.