ಮಂಡ್ಯ: ಬೆಳಗಾವಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ತೋಟಗಾರಿಕಾ ಸಚಿವ ಕೆ.ಸಿ ನಾರಾಯಣಗೌಡ ಅವರು ಜೈಕಾರ ಹಾಕಿದ್ದು, ತೀವ್ರ ವಿವಾದಕ್ಕೆ ಕಾರಣರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಫೆಬ್ರವರಿ 20ರಂದು ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾರಾಯಣಗೌಡ ಅವರು ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಭೆಯಲ್ಲಿ ಮರಾಠಿಯಲ್ಲೇ ಮಾತನಾಡಿರುವ ಅವರು, “ಈಗ ನಾನು ಏನೇ ಆಗಿದ್ದರೂ ಅದು ಮಹಾರಾಷ್ಟ್ರದಿಂದ. 25 ವರ್ಷಗಳ ಹಿಂದೆ ಮುಂಬೈಗೆ ಹೋಗಿ ಹೋಟೇಲ್ ಉದ್ಯಮಿಯಾಗಿ, ಬಿಲ್ಡರ್ ಆಗಿ, ಆದಾದ ಮೇಲೆ ಇಲ್ಲಿಗೆ ಬಂದು ರಾಜಕಾರಣಿಯಾದೆ”.”ನನ್ನನ್ನು ಉದ್ಯಮಿಯನ್ನಾಗಿ ಮಾಡಿದ್ದೇ ಮಹಾರಾಷ್ಟ್ರ. ಜೈ ಮಹಾರಾಷ್ಟ್ರ ಮತ್ತು ಜೈ ಶಿವಾಜಿ ಮಹಾರಾಜ್ ಎಂದು ಹೇಳಲು ಬಯಸುತ್ತೇನೆ. ಇಂದು ನನ್ನ ದೇಹದಲ್ಲಿ ಶಕ್ತಿ, ತಾಕತ್ತು ಇದೆ ಎಂದರೆ ಅದು ಮಹಾರಾಷ್ಟ್ರದ್ದು, ಜೈ ಮಹಾರಾಷ್ಟ್ರ” ಎಂದು ಘೋಷಣೆ ಕೂಗಿದ್ದಾರೆ.
ಇನ್ನು ಕರ್ನಾಟಕದಲ್ಲಿದ್ದುಕೊಂಡು ಬೇರೆ ರಾಜ್ಯವನ್ನು ಹೊಗಳಿ, ಜೈಕಾರ ಹಾಕಿದ್ದಕ್ಕೆ ಕನ್ನಡ ಸಂಘಟನೆಗಳಿಂದ ಟೀಕೆಗಳು ಕೇಳಿಬರುತ್ತಿವೆ.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








