ಕ್ವಾರಂಟೈನ್ ಗೆ ಒಳಗಾದ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್
ಶಿಮ್ಲಾ, ಜುಲೈ 22: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಬುಧವಾರ ತಮ್ಮ ಅಧಿಕೃತ ನಿವಾಸದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ತಮ್ಮ ಕಚೇರಿಯಲ್ಲಿ ಉಪ ಕಾರ್ಯದರ್ಶಿ ಅಧಿಕಾರಿಯೊಬ್ಬರಿಗೆ ಕೋವಿಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಠಾಕೂರ್ ಮತ್ತು ಅವರ ಸಿಬ್ಬಂದಿಗಳು ಶೀಘ್ರದಲ್ಲೇ ಕೊರೋನಾ ವೈರಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ಎಲ್ಲಾ ಕಾರ್ಯಕ್ರಮಗಳನ್ನು ಸದ್ಯಕ್ಕೆ ರದ್ದುಪಡಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.








