ಪ್ರಚಾರದ ವೇಳೆ `ಜೈ ಶ್ರೀರಾಮ್’ ಘೋಷಣೆ : ಡಿಕೆಶಿ ಹಿಂದುತ್ವ ಜಪ
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣಾ ಕಣ ರಂಗೇರಿದ್ದು, ಮೂರು ಪಕ್ಷಗಳ ಜಿದ್ದಿಗೆ ಬಿದ್ದು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.
ಅದರಲ್ಲೂ ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರ ಕಟ್ಟಿಕೊಂಡಿರುವವರಂತೆ ಕ್ಷೇತ್ರದಲ್ಲಿ ಮತಯಾಚನೆ ಮಾಡುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಗೆಲುವಿಗಾಗಿ ಡಿಕೆಶಿ ಎಲ್ಲಾ ರೀತಿಯ ಪ್ರಯತ್ನಗಳನ್ನೂ ನಡೆಸುತ್ತಿದ್ದಾರೆ.
ಡಿಕೆಶಿ ಹಿಂದುತ್ವ ಜಪ
ಹೌದು…! ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಡಿ.ಕೆ.ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ. ಹಿಂದೂ ಜಾಗೃತ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ.
ನಿನ್ನೆ ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಪರ ಡಿಕೆಶಿವಕುಮಾರ್ ಪ್ರಚಾರ ರ್ಯಾಲಿ ನಡೆಸುತ್ತಿದ್ದರು. ಈ ವೇಳೆ ಹಿಂದೂ ಜಾಗೃತ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕುಸುಮಾರನ್ನು ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ : ಕಾಂಗ್ರೆಸ್ ಗೆ ವೋಟ್ ಹಾಕಿ : ಜ್ಯೋತಿರಾಧಿತ್ಯ ಸಿಂಧಿಯಾ ಎಡವಟ್ಟು
ನಂತರ ಮೈಕ್ ಹಿಡಿದು ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಇನ್ನು ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಪರ ಹೆಚ್ ಕುಸುಮಾ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ವಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ನವೆಂಬರ್ ಮೂರರಂದು ಮತದಾನ ನಡೆಯಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel