ಬೆಂಗಳೂರು : ಡ್ರಗ್ ಮಾಫಿಯಾ ಜೊತೆ ನಂಟಿರುವ ಆರೋಪದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಲಗ್ರಾನಿ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ.
ನಟಿಯರ ಜಾಮೀನು ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಂಡ ಬೆಂಗಳೂರಿನ ಎಸ್ ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ.
ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿದ ಕಾರಣ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.
ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು, ಆದೇಶವನ್ನು ಸೆಪ್ಟೆಂಬರ್ 24ಕ್ಕೆ ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ.








