ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜೈಪುರದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಮತ್ತೊಂದು ದೊಡ್ಡ ಕ್ರಿಕೆಟ್ ಮೈದಾನ…!

admin by admin
July 4, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಜೈಪುರದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಮತ್ತೊಂದು ದೊಡ್ಡ ಕ್ರಿಕೆಟ್ ಮೈದಾನ…!

ಭಾರತದಲ್ಲಿ ಮತ್ತೊಂದು ಹೈಫೈ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದೆ. ಮೆಲ್ಬರ್ನ್, ಮೊಟೇರಾ ಕ್ರೀಡಾಂಗಣದ ಬಳಿಕ ವಿಶ್ವದ ಅತೀ ದೊಡ್ಡ ಕ್ರೀಡಾಂಗಣ ಇದಾಗಲಿದೆ. ಅಂದ ಹಾಗೇ ಈ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಮುಂದಾಗಿರುವುದು ರಾಜಸ್ತಾನ ಕ್ರಿಕೆಟ್ ಸಂಸ್ಥೆ.
ಜೈಪುರ- ದೆಹಲಿ ನ್ಯಾಷನಲ್ ಹೈವೆಯ ಮಧ್ಯೆ ಈ ಕ್ರೀಡಾಂಗಣ ತಲೆ ಎತ್ತಲಿದೆ. ಜೈಪುರದಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಚೊಂಪ್ ಗ್ರಾಮದಲ್ಲಿ ಈ ಹೈ ಫೈ ಕ್ರೀಡಾಂಗಣಕ್ಕೆ ನೀಲ ನಕ್ಷೆ ರೂಪಿಸಲಾಗಿದೆ. ಸುಮಾರು ನೂರು ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಈ ಕ್ರೀಡಾಂಗಣದ ಒಟ್ಟು ಕಾಮಗಾರಿ ವೆಚ್ಚ 350 ಕೋಟಿ ರೂಪಾಯಿ ಆಗಲಿದೆ ಎಂದು ರಾಜಸ್ತಾನ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮಹೇಂದ್ರ ಶರ್ಮಾ ತಿಳಿಸಿದ್ದಾರೆ.
ಈ ಕ್ರೀಡಾಂಗಣದಲ್ಲಿ ಸುಮಾರು 75 ಸಾವಿರ ಪ್ರೇಕ್ಷಕರು ಪಂದ್ಯವನ್ನು ವೀಕ್ಷಣೆ ಮಾಡಬಹುದಾಗಿದೆ. ಅಹಮ್ಮದಾಬಾದ್‍ನ ಮೊಟೇರಾ ಕ್ರೀಡಾಂಗಣದಲ್ಲಿ 1.10 ಲಕ್ಷ ಪ್ರೇಕ್ಷಕರು ಹಾಗೂ ಮೆಲ್ಬರ್ನ್ ಕ್ರೀಡಾಂಗಣದಲ್ಲಿ 1.02 ಪ್ರೇಕ್ಷಕರು ಪಂದ್ಯವನ್ನು ವೀಕ್ಷಣೆ ಮಾಡಬಹುದಾಗಿದೆ. ಹೀಗಾಗಿ ಇದು ವಿಶ್ವದ ಅತೀ ದೊಡ್ಡ ಮೂರನೇ ಕ್ರೀಡಾಂಗಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕ್ರೀಡಾಂಗಣದ ಕಾಮಗಾರಿ ಮುಂದಿನ ನಾಲ್ಕೈದು ತಿಂಗಳಲ್ಲಿ ಆರಂಭವಾಗಲಿದೆ. ಮೆಹ್ತಾ ಆಂಡ್ ಆಸೋಸಿಯೇಟ್ಸ್ ಎಲ್‍ಎಲ್‍ಪಿ ಮತ್ತು ದೆಹಲಿ ಮೂಲದ ಜಿಆರ್‍ಎಸ್ ಸ್ಪೋಟ್ರ್ಸ್ ಡಿಸೈನ್ ಕಂಪೆನಿಯು ಕ್ರೀಡಾಂಗಣದ ಕಾಮಗಾರಿಯನ್ನು ವಹಿಸಿಕೊಂಡಿದೆ.
ಇನ್ನು ಈ ಕ್ರೀಡಾಂಗಣದಲ್ಲಿ ಒಳಾಂಗಣದ ಕ್ರೀಡೆಗಳ ಸೌಲಭ್ಯಗಳೂ ಇವೆ. ಹಾಗೇ ಕ್ರೀಡಾ ತರಬೇತಿ ಅಕಾಡೆಮಿ, ಕ್ಲಬ್ ಹೌಸ್ ಜೊತೆಗೆ ಸುಮಾರು ನಾಲ್ಕು ಸಾವಿರ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯಗಳಿವೆ. ಇನ್ನು ಮೈದಾನದಲ್ಲಿ ಎರಡು ಅಭ್ಯಾಸದ ಮೈದಾನಗಳಿವೆ. ಈ ಮೈದಾನಗಳಲ್ಲಿ ರಣಜಿ ಪಂದ್ಯಗಳನ್ನು ಆಯೋಜಿಸಲಾಗುವುದು. ಹಾಗೇ ಪ್ರೇಕ್ಷಕರಿಗೆ ಎರಡು ರೆಸ್ಟೋರೆಂಟ್‍ಗಳೂ ಇವೆ. ಜೊತೆಗೆ 30 ನೆಟ್ಸ್ ಪಿಚ್‍ಗಳು, ಸುದ್ದಿಗೋಷ್ಠಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದ್ರು.
ಹಾಗೇ ಕ್ರೀಡಾಂಗಣದ ನಿರ್ಮಾಣಕ್ಕೆ ರಾಜಸ್ತಾನ ಕ್ರಿಕೆಟ್ ಸಂಸ್ಥೆಗೆ ಬಿಸಿಸಿಐ 90 ಕೋಟಿ ರೂ, ನೀಡಲಿದೆ. ಹಾಗೇ ಬಿಸಿಸಿಐ 100 ಕೋಟಿ ರೂ ಅನುದಾನವನ್ನು ನೀಡಲಿದೆ. ಅಲ್ಲದೆ 100 ಕೋಟಿ ರೂಪಾಯಿ ಬ್ಯಾಂಕ್ ಸಾಲ ಮತ್ತು 60 ಕೋಟಿ ರೂಪಾಯಿ ಕ್ರೀಡಾಂಗಣದ ಕಾರ್ಪೊರೇಟ್ ಬಾಕ್ಸ್ ನಿಂದ ಬರಲಿದೆ ಎಂದು ಮಹೇಂದ್ರ ಶರ್ಮಾ ಮಾಹಿತಿ ನೀಡಿದ್ದಾರೆ.

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ಈ ನಡುವೆ, ಕ್ರೀಡಾಂಗಣವನ್ನು ಎರಡು ಹಂತಗಳಲ್ಲಿ ನಿರ್ಮಾಣ ಮಾಡಲಾಗುವುದು. ಮೊದಲ ಹಂತದಲ್ಲಿ 45 ಸಾವಿರ ಪ್ರೇಕ್ಷಕರು ಪಂದ್ಯವನ್ನು ವೀಕ್ಷಣೆ ಮಾಡಬಹುದಾಗಿದೆ. ನಂತರ ಎರಡನೇ ಹಂತದ ಕಾಮಗಾರಿ ನಡೆಯಲಿದೆ. ಒಟ್ಟು ಎರಡು ಮೂರು ವರ್ಷಗಳಲ್ಲಿ ಕ್ರೀಡಾಂಗಣ ನಿರ್ಮಾಣದ ಕಾಮಗಾರಿ ಮುಗಿಯಲಿದೆ ಎಂದು ಅವರು ಹೇಳಿದ್ರು.

Tags: bcciICCjaipurarajasthan cricket boardteam india
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram