ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡದ ಆಟಗಾರ ಯಶಸ್ವಿ ಜೈಸ್ವಾಲ್ ಅರ್ಧ ಶತಕ ಬಾರಿಸಿ ದಾಖಲೆ ಬರೆದಿದ್ದಾರೆ.
ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 58 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಬೌಂಡರಿಗಳೊಂದಿಗೆ 57 ರನ್ ಸಿಡಿಸಿದ್ದಾರೆ. 57 ರನ್ಗಳೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ. ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.
ಈ ದಾಖಲೆ ಚೇತೇಶ್ವರ ಪೂಜಾರ ಹಾಗೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. ಗವಾಸ್ಕರ್ ಹಾಗೂ ಪೂಜಾರ 11 ಟೆಸ್ಟ್ ಪಂದ್ಯಗಳ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 1 ಸಾವಿರ ರನ್ ಗಳಿಸಿದ್ದಾರೆ. ಈ ದಾಖಲೆಯನ್ನು ಯಶಸ್ವಿ ಯಶಸ್ವಿಯಾಗಿಯೇ ಅಳಿಸಿ ಹಾಕಿದ್ದಾರೆ. ಮೊದಲ 9 ಟೆಸ್ಟ್ ಪಂದ್ಯಗಳಲ್ಲಿಯೇ 1028 ರನ್ ಕಲೆ ಹಾಕುವ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.
ಈ ಅರ್ಧಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿವೊಂದರಲ್ಲಿ 700ಕ್ಕೂ ಅಧಿಕ ರನ್ ಕಲೆ ಹಾಕಿ ವಿಶೇಷ ದಾಖಲೆ ಬರೆದಿದ್ದಾರೆ. 700ಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಭಾರತೀಯರಾಗಿದ್ದಾರೆ.