ನನ್ನ ರಾಜಕೀಯ ವಿರೋಧಿಗಳು ಇಡಿ ದಾಳಿ ಮಾಡಿಸಿದ್ದಾರೆ – ಜಮೀರ್
ಬೆಂಗಳೂರು: ಕಾಂಗ್ರೆಸ್ ನಾಯಕ , ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸ , ಕಚೇರಿ ಮೇಲೆ ಐಟಿ ದಾಳಿ ಪ್ರಕರಣ ಸಂಬಂಧ ಖುದ್ದು ಜಮೀರ್ ಪ್ರತಿಕ್ರಿಯೆ ನೀಡಿದ್ದು, ನನ್ನ ರಾಜಕೀಯ ವಿರೋಧಿಗಳು ದೂರು ನೀಡಿ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ವಿರೋಧಿಗಳು ನನ್ನ ವಿರುದ್ಧ ದೂರುಗಳನ್ನು ನೀಡಿದರಿಂದ ನನ್ನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ : ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ನಮನ
ನನ್ನ ಸಹೋದರರ ಮನೆಗೂ ಸಹ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು. ಇನ್ನೂ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿ 2006 ರಲ್ಲಿ ನಾನು ಜಾಗ ಖರೀದಿಸಿದ ದಾಖಲೆಗಳು ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಯನ್ನು ಒದಗಿಸಿದ್ದೇನೆ ಎಂದು ತಿಳಿಸಿದರು. ಅಲ್ಲದೆ ಬ್ಯಾಂಕ್ ಗೆ ಹೋಗಿ ನನ್ನ ಹಣಕಾಸಿನ ವ್ಯವಹಾರದ ಬಗ್ಗೆ ಸಹ ಮಾಹಿತಿ ಪಡೆದಿದ್ದಾರೆ. ಇನ್ನೂ ಮತ್ತೆ ವಿಚಾರಣೆಗೆ ಬರುವಂತೆ ಯಾವುದೇ ನೋಟಿಸ್ ನೀಡಿಲ್ಲ. ಆದ್ರೆ ಅವಶ್ಯಕತೆ ಇದ್ದರೆ ಪೋನ್ ಮಾಡುತ್ತೇವೆ ಆಗ ಬರಬೇಕಾಗುತ್ತದೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.