ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿ ಕುರ್ಚಿಗೆ ಕುತ್ತು ಬಂತಾ? ಚಾಮರಾಜಪೇಟೆಯಲ್ಲಿ ರಾರಾಜಿಸಿತು ಜಮೀರ್ ಮುಂದಿನ ಡಿಸಿಎಂ ಪೋಸ್ಟರ್

Jameer's next DCM poster wins in Chamarajpet

Shwetha by Shwetha
December 27, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಮತ್ತೆ ಹೊತ್ತಿಕೊಂಡಿದೆ. ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಂಚ ಮೌನಕ್ಕೆ ಶರಣಾಗಿದ್ದಾರೆ ಎಂದುಕೊಳ್ಳುವಷ್ಟರಲ್ಲೇ, ಅವರ ಬೆಂಬಲಿಗರು ಮತ್ತು ಪಕ್ಷದ ಇತರೆ ಬಣಗಳು ಬೀದಿಗಿಳಿದು ಪೋಸ್ಟರ್ ಸಮರ ಸಾರುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕೂಗು ಒಂದೆಡೆಯಾದರೆ, ಇದೀಗ ಉಪಮುಖ್ಯಮಂತ್ರಿ ಸ್ಥಾನದ ಮೇಲೂ ಕಣ್ಣು ಬಿದ್ದಿದೆ. ಡಿಕೆ ಶಿವಕುಮಾರ್ ಅವರಿಗೆ ಸೆಂಡ್ ಆಫ್ ನೀಡಿ, ಆ ಸ್ಥಾನಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಂದು ಕೂರಿಸಲಾಗುತ್ತದೆ ಎಂಬ ಸ್ಫೋಟಕ ಚರ್ಚೆಯನ್ನು ಚಾಮರಾಜಪೇಟೆಯ ಪೋಸ್ಟರ್‌ಗಳು ಹುಟ್ಟುಹಾಕಿವೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಚಾಮರಾಜಪೇಟೆಯಲ್ಲಿ ರಾರಾಜಿಸಿದ ನೆಕ್ಸ್ಟ್ ಡಿಸಿಎಂ ಪೋಸ್ಟರ್

ಚಾಮರಾಜಪೇಟೆ ಕ್ಷೇತ್ರದ ಜೆಜೆ ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿರುವ ಬ್ಯಾನರ್‌ಗಳು ಈಗ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿಸಿವೆ. ಹೊಸ ವರ್ಷದ ಶುಭಾಶಯ ಕೋರುವ ನೆಪದಲ್ಲಿ ಹಾಕಲಾಗಿರುವ ಈ ಬ್ಯಾನರ್‌ಗಳಲ್ಲಿ, ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಂದಿನ ಡಿಸಿಎಂ ಎಂದು ಸಂಬೋಧಿಸಲಾಗಿದೆ. ಜಮೀರ್ ಬೆಂಬಲಿಗರು ಅತ್ಯುತ್ಸಾಹದಿಂದ ಅಂಟಿಸಿರುವ ಈ ಪೋಸ್ಟರ್‌ಗಳು ಹೈಕಮಾಂಡ್ ಅಂಗಳಕ್ಕೂ ತಲುಪಿದ್ದು, ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ.

ಡಿಕೆಶಿ ಸಿಎಂ ಆದರೆ ಜಮೀರ್ ಡಿಸಿಎಂ?

ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿರುವ ಬಿಸಿ ಬಿಸಿ ಚರ್ಚೆಯ ಪ್ರಕಾರ, ಒಂದು ವೇಳೆ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದರೆ, ತೆರವಾಗುವ ಡಿಸಿಎಂ ಸ್ಥಾನ ಯಾರಿಗೆ ಎಂಬ ಪ್ರಶ್ನೆ ಎದ್ದಿದೆ. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರಬಲ ನಾಯಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ಕಟ್ಟಲಾಗುತ್ತದೆ ಎಂಬ ಲೆಕ್ಕಾಚಾರ ಜಮೀರ್ ಪಾಳೆಯದಲ್ಲಿದೆ. ಸಂಪುಟ ಪುನಾರಚನೆ ನಡೆದರೂ ಜಮೀರ್‌ಗೆ ಬಡ್ತಿ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ.

ಪರಮೇಶ್ವರ್ ಪರ ಮತ್ತೊಂದು ಬಣದ ಬ್ಯಾಟಿಂಗ್

ಇತ್ತ ಜಮೀರ್ ಹೆಸರು ಡಿಸಿಎಂ ಸ್ಥಾನಕ್ಕೆ ಕೇಳಿಬರುತ್ತಿದ್ದಂತೆಯೇ, ಅತ್ತ ದಲಿತ ಸಿಎಂ ಕೂಗು ಕೂಡ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಬಳಿಕ ಆ ಕುರ್ಚಿಗೆ ಅತಿ ಸೂಕ್ತ ವ್ಯಕ್ತಿ ಡಾ ಜಿ ಪರಮೇಶ್ವರ್ ಮಾತ್ರ ಎಂದು ದಲಿತ ಸಂಘಟನೆಗಳು ಮತ್ತು ಪರಮೇಶ್ವರ್ ಬೆಂಬಲಿಗರು ಪ್ರತಿಪಾದಿಸುತ್ತಿದ್ದಾರೆ. ಹೀಗಾಗಿ ಸಿಎಂ ಕುರ್ಚಿ ಖಾಲಿಯಾಗುವ ಮುನ್ನವೇ, ಮುಂದಿನ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ದಲಿತ ಹಾಗೂ ಅಲ್ಪಸಂಖ್ಯಾತ ನಾಯಕರ ನಡುವೆ ಪೈಪೋಟಿ ಏರ್ಪಟ್ಟಂತೆ ಕಾಣುತ್ತಿದೆ.

ಒಟ್ಟಾರೆಯಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡರೂ, ಒಳಗೆ ಅಧಿಕಾರಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಮಾತ್ರ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಸದ್ಯಕ್ಕೆ ಸೈಲೆಂಟ್ ಆಗಿರುವ ಸಿದ್ದರಾಮಯ್ಯ ಮತ್ತು ಡಿಕೆಶಿ ಈ ಪೋಸ್ಟರ್ ಪಾಲಿಟಿಕ್ಸ್‌ಗೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram