ಇಂಗ್ಲೆಂಡ್ -ನ್ಯೂಜಿಲೆಂಡ್ 2ನೇ ಟೆಸ್ಟ್ – ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಲಿದ್ದಾರೆ ಜೇಮ್ಸ್ ಆಂಡರ್ಸನ್..!

1 min read
jems anderson anil kumble saakshatv test cricket

ಇಂಗ್ಲೆಂಡ್ -ನ್ಯೂಜಿಲೆಂಡ್ 2ನೇ ಟೆಸ್ಟ್ – ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಲಿದ್ದಾರೆ ಜೇಮ್ಸ್ ಆಂಡರ್ಸನ್..!

anil kumble team india saakshatvಇಂಗ್ಲೆಂಡ್ ಕ್ರಿಕೆಟ್ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ಅವರು ಮತ್ತೊಂದು ದಾಖಲೆಯ ಸನೀಹದಲ್ಲಿದ್ದಾರೆ.
ನ್ಯೂಜಿಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ದಾಖಲೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ. ಅಂದ ಹಾಗೇ ಈ ದಾಖಲೆ ಮಾಡಲು ಬೇಕಾಗಿರುವುದು ಜೇಮ್ಸ್ ಆಂಡರ್ಸನ್ ಗೆ ನಾಲ್ಕು ವಿಕೆಟ್ ಮಾತ್ರ.
ಹೌದು, ಜೇಮ್ಸ್ ಆಂಡರ್ಸನ್ ಅವರು ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇದಕ್ಕೆ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಸಾಕ್ಷಿಯಾಗುವ ಸಾಧ್ಯತೆ ಇದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಅನಿಲ್ ಕುಂಬ್ಳೆ 619 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 800 ವಿಕೆಟ್ ಪಡೆದು ಅಗ್ರ ಸ್ಥಾನದಲ್ಲಿದ್ರೆ, ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಡಾಕ್ಟರ್ ಶೇನ್ ವಾರ್ನ್ 708 ಎರಡನೇ ಸ್ಥಾನದಲ್ಲಿದ್ದಾರೆ. ಸದ್ಯ ಇಂಗ್ಲೆಂಡ್ ನ ವೇಗಿ ಜೇಮ್ಸ್ jems anderson england saakshatvಆಂಡರ್ಸನ್ 616 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ.
161 ಟೆಸ್ಟ್ ಪಂದ್ಯಗಳನ್ನು ಆಡಿರುವ ಜೇಮ್ಸ್ ಆಂಡರ್ಸನ್ ಅವರು 26.58ರ ಸರಾಸರಿಯಲ್ಲಿ ವಿಕೆಟ್ ಕಬಳಿಸಿದ್ದಾರೆ. ಇನ್ನು ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
ಒಟ್ಟಿನಲ್ಲಿ ಜೇಮ್ಸ್ ಆಂಡರ್ಸನ್ ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ವೇಗದ ಬೌಲರ್ ಗಳಲ್ಲಿ ಮೊದಲಿಗರಾಗಿದ್ದಾರೆ. ಎರಡನೇ ವೇಗದ ಬೌಲರ್ ಆಸ್ಟ್ರೇಲಿಯಾದ ಗ್ಲೇನ್ ಮೆಕ್ ಗ್ರಾಥ್ ಅವರದ್ದಾಗಿದ್ದಾರೆ.
ಇನ್ನು ಪ್ರಥಮ ದರ್ಜೆಯ ಕ್ರಿಕೆಟ್ ನಲ್ಲೂ ಜೇಮ್ಸ್ ಆಂಡರ್ಸನ್ ದಾಖಲೆಯೊಂದನ್ನು ಬರೆಯಲಿದ್ದಾರೆ. ಪ್ರಥಮ ದರ್ಜೆಯ ಕ್ರಿಕೆಟ್ ನಲ್ಲಿ ಒಂದು ಸಾವಿರ ವಿಕೆಟ್ ಪಡೆಯಲು ಜೇಮ್ಸ್ ಆಂಡರ್ಸನ್ ಗೆ ಬೇಕಾಗಿರುವುದು ಆರು ವಿಕೆಟ್ ಗಳು ಮಾತ್ರ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd