ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗಿ ಜೇಮ್ಸ್ ಪ್ಯಾಟಿನ್ಸನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
31ರ ಹರೆಯದ ಜೇಮ್ಸ್ ಪ್ಯಾಟಿನ್ಸನ್ ಅವರ ಈ ನಿರ್ಧಾರ ಅನಿರೀಕ್ಷಿತವಾದ್ರೂ ನಿರೀಕ್ಷಿತವಾಗಿತ್ತು. ಆಸ್ಟ್ರೇಲಿಯಾ ತಂಡದ ಪರ ದಶಕಗಳಿಂದ ಆಡುತ್ತಿದ್ರೂ ಅವರನ್ನು ಗಾಯದ ಸಮಸ್ಯೆ ಬೆಂಬಿಡದೇ ಕಾಡುತ್ತಿತ್ತು.
ಇದೀಗ ಆಶಷ್ ಸರಣಿಯ ಮುನ್ನವೇ ಜೇಮ್ಸ್ ಪ್ಯಾಟಿನ್ಸನ್ ಅವರು ಗುಡ್ ಬೈ ಹೇಳಿ ಯುವ ಆಟಗಾರರಿಗೆ ಅವಕಾಶ ನೀಡಿದ್ದಾರೆ.
2011ರ ಡಿಸೆಂಬರ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಜೇಮ್ಸ್ ಪ್ಯಾಟಿನ್ಸನ್ ಅವರು ಐದು ವಿಕೆಟ್ ಗಳ ಗೊಂಚಲು ಪಡೆದಿದ್ದರು. ಅಲ್ಲದೆ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಒಟ್ಟು 14 ವಿಕೆಟ್ ಉರುಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
ಒಟ್ಟು 21 ಟೆಸ್ಟ್ ಪಂದ್ಯಗಳಲ್ಲಿ ಜೇಮ್ಸ್ ಪ್ಯಾಟಿನ್ಸನ್ ಅವರು 81 ವಿಕೆಟ್ ಪಡೆದ್ದಿದ್ದರು. ಹಾಗೇ 15 ಏಕದಿನ ಪಂದ್ಯ ಹಾಗೂ ನಾಲ್ಕು ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ.
ಇನ್ನು ಆಶಷ್ ಸರಣಿಯಲ್ಲಿ ಆಡದಿರುವ ಬಗ್ಗೆ ಜೇಮ್ಸ್ ಪ್ಯಾಟಿನ್ಸನ್ ಅವರು ಬೇಸರ ಕೂಡ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನಾನು ತಂಡದಲ್ಲಿದ್ರೆ ಸರಿಯಾದ ನ್ಯಾಯ ಕೊಡಲು ಸಾಧ್ಯವಾಗುತ್ತಿಲ್ಲ. ಹಂಡ್ರೆಡ್ ಪರ್ಸೆಂಟ್ ಆಡಲು ನನ್ನ ದೇಹ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ರು. 2019ರ ಆಶಷ್ ಸರಣಿ 2-2ರಿಂದ ಸಮಗೊಳ್ಳಲು ಜೇಮ್ಸ್ ಪ್ಯಾಟಿನ್ಸನ್ ಅವರ ಕೊಡುಗೆ ಅಮೋಘವಾಗಿತ್ತು.
ಚಾಂಪಿಯನ್ಸ್ ಟ್ರೋಫಿ ರಾಯಭಾರಿಯಾಗಿ ಶಿಖರ್ ಧವನ್ ನೇಮಕ
ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅವರನ್ನು 2025 ಚಾಂಪಿಯನ್ಸ್ ಟ್ರೋಫಿಯ ಅಧಿಕೃತ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಧವನ್ ಮಾತ್ರವಲ್ಲದೆ, ಪಾಕಿಸ್ತಾನದ ಮಾಜಿ ನಾಯಕ ಸರ್ಫರಾಜ್...