ಜಮ್ಮುವಿನ ಕಾಲೇಜಿನ ಆವರಣದಲ್ಲಿ ಆಜಾನ್ ವಿರೋಧಿಸಿ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ.. ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಕೂಗುವುದನ್ನು ವಿರೋಧಿಸಿ ಜಮ್ಮುವಿನ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದಾರೆ.
ಗಾಂಧಿ ಮೆಮೊರಿಯಲ್ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದು, ಬಳಿಕ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ತರಗತಿಯಲ್ಲಿ ಕಲಿಕೆಗೆ ಮಸೀದಿಯ ಧ್ವನಿವರ್ಧಕದ ಸದ್ದು ಅಡಚಣೆ ಮಾಡುತ್ತಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (JMC) ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವ ನಿರ್ಧಾರ ಪ್ರಕಟಿಸಲಾಗಿತ್ತು.. ಬಿಜೆಪಿ ಕೌನ್ಸಿಲರ್ ನರೋತ್ತಮ್ ಶರ್ಮಾ ಈ ನಿರ್ಣಯ ಮಂಡಿಸಿದ್ದರು.
ಬಹುಮತದೊಂದಿಗೆ ಈ ನಿರ್ಣಯ ಅಂಗೀಕರಿಸಲಾಗಿತ್ತು.