ಜಮ್ಮುಕಾಶ್ಮೀರ : LeM ಉಗ್ರ ಸಂಘಟನೆ ಮುಖ್ಯಸ್ಥನ ಬಂಧನ
ಜಮ್ಮು ಮತ್ತು ಕಾಶ್ಮೀರ : ಕಣಿವೆ ನಾಡು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಲಷ್ಕರ್-ಎ-ಮುಸ್ತಾಫ ಸಂಘಟನೆಯ ಮುಖ್ಯಸ್ಥ ಹಿದಾಯತ್ ಉಲ್ಲಾ ಮಲಿಕ್‍ನನ್ನು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ಜಮ್ಮು- ಕಾಶ್ಮೀರ, ರಂಬನ್ ಪ್ರದೇಶದ 14 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಲಷ್ಕರ್-ಎ-ಮುಸ್ತಾಫ ಸಂಘಟನೆಯ ಮುಖ್ಯಸ್ಥ ಹಿದಾಯತ್ ಉಲ್ಲಾ ಮಲಿಕ್‍ನನ್ನು ಬಂಧಿಸಲಾಗಿದೆ. ಅಲ್ಲದೆ ಐದು ಕೆ.ಜಿ ಐಇಡಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸದ್ಯ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.