ಜಮ್ಮುವಿನಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
ಒಂದೆ ಕುಟುಂಬದ 6 ಮಂದಿ ಶವವಾಗಿ ಪತ್ತೆಯಾಗಿರುಯವ ಘಟನೆ ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ನಡೆದಿದೆ. ನಾಲ್ವರು ಪುರಷರು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಇವರೆಲ್ಲರು ವಿಷ ಸೇವಿಸಿ ಸಾವನ್ನಪ್ಪಿರುವ ಶಂಕೆ ಇದೆ. ಮೆನ ಮೇಲೆ ಯಾವುದೇ ದಾಳಿ ನಡೆದ ಗುರುತು ಕಂಡು ಬಂದಿಲ್ಲ. ಆದರೆ ಪೊಲೀಸರು ಈ ವಿಷಯವನ್ನ ಇನ್ನೂ ಖಚಿತ ಪಡಿಸಿಲ್ಲ. ಘಟನೆ ಕುರಿತು ತನಿಖೆ ನಡೆಸುತ್ತಿದ್ದೇವೆ, ತನಿಖೆಯ ನಂತರವೇ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.
ಮೃತರನ್ನು ಸಕೀನಾ ಬೇಗಂ, ಅವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್ ಮತ್ತು ರುಬಿನಾ ಬಾನೋ, ಮಗ ಜಾಫರ್ ಸಲೀಂ ಮತ್ತು ಇಬ್ಬರು ಸಂಬಂಧಿಕರಾದ ನೂರ್-ಉಲ್-ಹಬೀಬ್ ಮತ್ತು ಸಜಾದ್ ಅಹ್ಮದ್ ಎಂದು ಗುರುತಿಸಲಾಗಿದೆ.
Jammu and Kashmir Police recovered six dead bodies from a house on Wednesday in J&K’s Jammu district.