ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ ಓರ್ವ ಪೊಲೀಸ್ ಸಾವು…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾನುವಾರ ಉಗ್ರರು ದಾಳಿ ನಡೆಸಿದ್ದು, ಓರ್ವ ಪೊಲೀಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸಿಆರ್ಪಿಎಫ್ ಯೋಧ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ತಕ್ಷಣ ಹೆಚ್ಚುವರಿ ಪಡೆಗಳು ಅಲ್ಲಿಗೆ ಆಗಮಿಸಿ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡವು. ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಶಿಪಿಯಾನ್ ಜಿಲ್ಲೆಯ ಬಾಸ್ಕುಚಾನ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿತ್ತು. ಈ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರಿದ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದಿದ್ದಾರೆ. ಮೃತರನ್ನು ಸೋಫಿಯಾನ್ನ ನಸೀರ್ ಅಹಮದ್ ಭಟ್ ಎಂದು ಗುರುತಿಸಲಾಗಿದೆ.
ಎನ್ಕೌಂಟರ್ ನಡೆದ ಪ್ರದೇಶದಿಂದ ಪಡೆಗಳು ಎಕೆ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಎರಡು ದಿನಗಳ ಹಿಂದೆ, ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ, ಜೈಶ್-ಎ-ಮೊಹಮ್ಮದ್ನೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಕೊಂದಿದ್ದವು.
Jammu and kashmir: Terror attack in Pulwama, police killed, CRPF jawan injured