ಜಮ್ಮು ಕಾಶ್ಮೀರ – ಭದ್ರತಾ ಪಡೆಗಳ ಎನ್-ಕೌಂಟರ್ ಗೆ ಭಯೋತ್ಪಾದಕನ ಸಾವು
ಶ್ರೀನಗರ, ಅಗಸ್ಟ್ 23: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಜಮ್ಮು & ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ.
ಬಾರಾಮುಲ್ಲಾದ ಕ್ರೇರಿಯ ಸಲೂಸಾ ಪ್ರದೇಶದಲ್ಲಿ ಎನ್ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಜಂಟಿ ಕಾರ್ಯಾಚರಣೆಯನ್ನು ಪೊಲೀಸ್, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ನಡೆಸುತ್ತಿದ್ದಾರೆ.
ಭದ್ರತಾ ಪಡೆಗಳ ಶೋಧ ಕಾರ್ಯಚರಣೆ ವೇಳೆಯಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದು, ಆ ಬಳಿಕ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಪ್ರತೀಕಾರ ತೀರಿಸಿಕೊಂಡವು ಎಂದು ಅಧಿಕಾರಿ ಹೇಳಿದರು.