ಜಮ್ಮು- ಕಾಶ್ಮೀರ : ಗಡಿ ಪ್ರದೇಶದಲ್ಲಿ ಡ್ರೋಣ್ ಹಾರಾಟ, ಸೇನಾಪಡೆಯಿಂದ ಗುಂಡಿನ ದಾಳಿ
ಶ್ರೀನಗರ : ಮಂಗಳವಾರ ತಡರಾತ್ರಿ ಜಮ್ಮು- ಕಾಶ್ಮೀರ ಅರ್ನಿಯಾ ಸೆಕ್ಟರ್ ನ ಅಂತರರಾಷ್ಟ್ರೀಯ ಗಡಿ ಬಳಿ ಡ್ರೋಣ್ ಪತ್ತೆಯಾಗಿದ್ದು, ಡ್ರೋಣ್ ಮೇಲೆ ಬಿಎಸ್‌ಎಫ್ ಪಡೆಗಳೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅರ್ನಿಯಾ ಸೆಕ್ಟರ್‌ನಲ್ಲಿ ಮಿಣುಕುವ ಕೆಂಪು ಬಣ್ಣದ ದೀಪವನ್ನು ಗಮನಿಸಿದ ಸೇನಾ ಯೋಧರು ದೀಪದ ಕಡೆಯಲ್ಲಿ ಗುಂಡಿನ ದಾಳಿ ಶುರು ಮಾಡಿದ್ದಾರೆ.. ಆ ಡ್ರೋಣ್ ನಮ್ಮ ಗಡಿಯ 200 ಮೀಟರ್ ಒಳಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತುಕೊಂಡ ಯೋಧರು ದಾಳಿ ಮಾಡಿದ್ದಾರೆ. ಆದರೆ ಈವರೆಗೂ ಯಾವುದೇ ಡ್ರೋಣ್ ಪತ್ತೆಯಾಗಿಲ್ಲ ಎಂದು ಬಿಎಸ್ ಎಫ್ ಸ್ಪಷ್ಟಪಡಿಸಿದೆ.
ಬೆಸ್ಕಾಮ್ – 400 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಕಳೆದ ಜೂನ್ 27ರ ಭಾನುವಾರ ಭಾರತೀಯ ವಾಯುಸೇನೆ ನಿಯಂತ್ರಣದಲ್ಲಿರುವ ಜಮ್ಮು ವಿಮಾನ ನಿಲ್ದಾಣದಲ್ಲಿ ಡ್ರೋಣ್ ದಾಳಿ ನಡೆಸಲಾಗಿತ್ತು. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿತ್ತು. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ 2ಡನೇ ಸ್ಫೋಟ ಸಂಭವಿಸಿತ್ತು. ಇನ್ನೂ ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.