Jammu Kashmir: ಜಮ್ಮು ಕಾಶ್ಮೀರ – ಹಿಮಪಾತಕ್ಕೆ ಸಿಲುಕಿ ಮೂವರು ಭಾರತೀಯ ಯೋಧರು ಹುತಾತ್ಮ
ಜಮ್ಮು ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಮೂವರು ಭಾರತೀಯ ಯೋಧರು ಮೃತಪಟ್ಟಿದ್ದಾರೆ.
ಜಮ್ಮು ಕಾಶ್ಮೀರದ ಮಚ್ಚಿಲ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕರ್ತವ್ಯ ನಿರತರಾಗಿದ್ದ ಮೂವರು ಯೋಧರು ಶುಕ್ರವಾರ ಮೃತಪಟ್ಟಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ಪ್ರದೇಶದಲ್ಲಿ 56 ರಾಷ್ಟ್ರೀಯ ರೈಫಲ್ಸ್ನ ಯೋಧರು ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಣೆ ವೇಳೆ ಹಿಮಪಾತ ಉಂಟಾಗಿದ್ದು, ಹಿಮಪಾತಕ್ಕೆ ಸಿಲುಕಿ ಯೋಧರು ಮೃತಪಟ್ಟಿದ್ದಾರೆ ಎಂದು ಕುಪ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಎಲ್ಲರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.
jammu-kashmir-jammu-kashmir-three-indian-soldiers-were-martyred-in-an-avalanche








