ಬಳ್ಳಾರಿ, ಜೂನ್ 5 : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮತ್ತು ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. ಇಂದು ಬೆಳಗ್ಗೆ 6.55 ರ ಸುಮಾರಿಗೆ ಹಂಪಿಯಲ್ಲಿ ಭೂಮಿ, ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಜಾರ್ಖಂಡ್ ನ ಜಮ್ಶೆಡ್‌ಪುರದಲ್ಲಿ ಭೂಕಂಪ ದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ದಾಖಲಾಗಿದೆ ಎಂದು ಎಎನ್‌ಐ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಂಕಿಅಂಶಗಳನ್ನು ಉಲ್ಲೇಖಿಸಿದೆ.
ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು, ಜಲ ಫಿರಂಗಿ ಪ್ರಯೋಗ
ನವದೆಹಲಿ: ಹರಿಯಾಣ ಮತ್ತು ಪಂಜಾಬ್ ಮಧ್ಯೆ ಇರುವ ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸರು ಅಶ್ರುವಾಯು ಹಾಗೂ ಜಲ ಫಿರಂಗಿ ಬಳಸಿದ್ದಾರೆ. ದೆಹಲಿ ಗಡಿ ಪ್ರವೇಶಕ್ಕೆ ಯತ್ನಿಸಿದ...