ಕರಾವಳಿ ಭಾಗಕ್ಕೆ 2 ಲಕ್ಷ ಕೋಟಿ ಬಂಡವಾಳ ಹೂಡುತ್ತೇವೆ – ಬಸವರಾಜ್ ಬೊಮ್ಮಾಯಿ..
ಕರಾವಳಿ ಭಾಗದಲ್ಲಿ 2 ಲಕ್ಷ ಕೋಟಿ ಬಂಡವಾಳ ಹೂಡಲಾಗುತ್ತದೆ, ಉಡುಪಿ, ಮಂಗಳೂರು ಸೇರಿ ಎಲ್ಲೆಡೆ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆ ಯಲ್ಲಿ ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಂತರ ಮಾತನಾಡಿದ ಸಿ ಎಂ ಬೊಮ್ಮಾಯಿಯವರು. ಯಡಿಯೂರಪ್ಪನವರ ಸರ್ಕಾರದ ಅವಧಿಯಲ್ಲಿ ಅಪಾರವಾದ ಯೋಜನೆಗಳನ್ನ ತರಲಾಗಿದೆ, ಮೀನುಗಾರರು, ರೈತರಿಗೆ ಹಲವು ಯೋಜನೆ ತಂದರು, ವಿದ್ಯಾನಿಧಿ ಮೀನುಗಾರರಿಗೂ ವಿಸ್ತರಣೆಯಾಗಿದೆ. ಕಾಪುವಿನಲ್ಲಿ ಮೀನುಗಾರರಿಗೆ ಮನೆ ಕಟ್ಟಿ ಕೊಡ್ತಿದ್ದೇವೆ, ರೇಷನ್ನಲ್ಲಿ ಈ ಭಾಗಕ್ಕೆ ಕುಸುವಲಕ್ಕಿ ಕೊಡ್ತೇವೆ ಎಂದು ಹೇಳಿದ್ದಾರೆ.
ಇಂದು ಸಾಮಾಜಿಕ ನ್ಯಾಯ ಭಾಷಣದ ಸರಕಾಗಿದೆ. ಕಾಂಗ್ರೆಸ್ ಪಕ್ಷ ಕೆಲವು ಸಮುದಾಯಗಳನ್ನು ಕೇವಲ ಭಾಷಣದಿಂದಲೇ ಹೊಟ್ಟೆ ತುಂಬಿಸುತ್ತಾ ಬಂದಿದೆ. ಸಿದ್ದರಾಮಯ್ಯ ಅವರಂತಹ ನಾಯಕರು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ತಾವೇ ಮುಂದುವರಿದಿದ್ದಾರೆಯೇ ಹೊರತು ಯಾರನ್ನೂ ಬೆಳೆಯಲು ಬಿಟ್ಟಿಲ್ಲ.
ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಮೀನುಗಾರರಿಗೆ ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆ ಒದಗಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಹಾಗೂ ಮೀನುಗಾರರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ.
ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸಾಗರ್ ಮಾಲಾ ಯೋಜನೆಗೆ ₹1774 ಕೋಟಿ ಅನುದಾನ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಬಸವರಾಜ್ ಬೊಮ್ಮಾಯಿ ಭಾಷಣದಲ್ಲಿ ಹೇಳಿದ್ದಾರೆ.
jana sankalpa yatra: We will invest 2 lakh crore in the coastal area – Basavaraj Bommai..