ಬೆಂಗಳೂರು: ರಾಷ್ಟ್ರದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕಾರಕ್ಕೆ ಬಳ್ಳಾರಿಯ ಖ್ಯಾತ ಕಲಾವಿದೆ, ಜಾನಪದ ಅಕಾಡೆಮಿ ಅಧ್ಯಕ್ಷೆ ಜೋಗತಿ ಮಂಜಮ್ಮ ಆಯ್ಕೆಯಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಂಜಮ್ಮ ಅವರನ್ನು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಹಾಗೂ ಪತ್ನಿ ಲಕ್ಷ್ಮಿ ಅರುಣಾ ಸನ್ಮಾನಿಸಿ ಗೌರವಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸಕ್ಕೆ ಜೋಗತಿ ಮಂಜಮ್ಮ ಅವರನ್ನು ಕರೆಸಿಕೊಂಡ ರೆಡ್ಡಿ ದಂಪತಿ, ತುಂಬು ಹೃದಯದಿಂದ ಸನ್ಮಾನಿಸಿದರು.
ಜೋಗತಿ ಮಂಜಮ್ಮ ಅವರನ್ನು ಸನ್ಮಾನಿಸಿದ ವೇಳೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ, ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ವಿಜಯನಗರ ಸಾಮ್ರಾಜ್ಯದ ಗತ ವೈಭವದ ಸಡಗರ ಸಂಭ್ರಗಳನ್ನು ಕಂಡ ಬಳ್ಳಾರಿ ಸೀಮೆಯು ಅನೇಕ ಮಹಾನ್ ಕಲಾವಿದರನ್ನು ಕಂಡ ಪುಣ್ಯ ಭೂಮಿ. ವಿಶ್ವ ವಿಖ್ಯಾತ ಜೋಳದ ರಾಶಿ ದೊಡ್ಡನಗೌಡರು, ಬಳ್ಳಾರಿ ರಾಘವ, ಕಾಳವ್ವ ಜೋಗತಿ, ತೊಗಲು ಗೊಂಬೆ ಆಟದ ಬೆಳಗಲಿ ವೀರಣ್ಣನವರು ಸೇರಿದಂತೆ ಹೀಗೆ ಅನೇಕ ಕಲಾವಿದರನ್ನು ಕಂಡ ಬಳ್ಳಾರಿ ಜಿಲ್ಲೆ. ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಸಡಗರ ಸಂಭ್ರಮಗಳನ್ನು ಕಾಣುತ್ತಲೇ ಬಂದಿದೆ. ಈ ದಿನ ಕೇಂದ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಮಂಜಮ್ಮ ಅವರು ಆಯ್ಕೆಯಾಗಿದ್ದಾರೆ.
20 ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ಮೊದಲ ಬಾರಿಗೆ ನಾವು ನಗರಸಭೆಯ ಆಡಳಿತದ ಚುಕ್ಕಾಣಿ ಹಿಡಿದಾಗ ನಗರಸಭೆಯ ವತಿಯಿಂದ ನಿರ್ಮಿಸಲಾದ ಪಾರ್ಕ್ ಉದ್ಘಾಟನಾ ಸಮಾರಂಭದಲ್ಲಿ ಮಂಜಮ್ಮ ಅವರ ನೃತ್ಯದ ಅದ್ಬುತ ಕಲೆಯನ್ನು ಕಂಡು ನಾನು ಮುಖವಿಸ್ಮಿತನಾಗಿದ್ದೆ. ಇಂತಹ ಅದ್ಬುತ ಕಲೆಯನ್ನು ನಾನು ಎಲ್ಲಿಯೂ ಕಂಡಿರಲಿಲ್ಲ ಎಂದು ಜನಾರ್ದನರೆಡ್ಡಿ ಖುಷಿ ವ್ಯಕ್ತಪಡಿಸಿದ್ದಾರೆ.
ಮುಂದೆ ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾದ ಸಂದರ್ಭದಲ್ಲಿಯೇ ಮಂಜಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತಹ ಅವಕಾಶ ದೊರಕಿರುವುದು ನಿಜಕ್ಕೂ ನನ್ನ ಅದೃಷ್ಟವೆಂದೇ ಭಾವಿಸುತ್ತೇನೆ. ಮಂಜಮ್ಮ ಅವರು ಇನ್ನೂ ನೂರಾರು ಕಾಲ ಬಾಳಿ ಬದುಕಲಿ, ಅವರ ಕಲೆಗೆ ನಮ್ಮ ಸದಾ ಪ್ರೋತ್ಸಾಹ ಇರುತ್ತದೆ. ಇಂತಹ ಕಲಾವಿದೆಯನ್ನು ಕಂಡ ಬಳ್ಳಾರಿ ಜಿಲ್ಲೆಯ ಜನತೆಗೆ ನಿಜಕ್ಕೂ ಹೆಮ್ಮಯ ಸಂಗತಿ ಎಂದು ಜನಾರ್ದನ ರೆಡ್ಡಿ ಸಂತಸ ಹಂಚಿಕೊಂಡರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸನ್ನಾನ ಸ್ವೀಕರಿಸಿ ಮಾತನಾಡಿದ ಜಾನಪದ ಅಕಾಡೆಮಿ ಅಧ್ಯಕ್ಷೆ ಜೋಗತಿ ಮಂಜಮ್ಮ, ಕೆಲಕಾಲ ಭಾವುಕರಾದರು. 20 ವರ್ಷಗಳ ಹಿಂದೆ ನಮ್ಮ ಕಲೆಗೆ ಪ್ರೋತ್ಸಾಹ ನೀಡಿದ್ದರಿಂದ ರಾಜ್ಯೋತ್ಸವ ಪ್ರಶಸ್ತಿ ಜತೆಗೆ, ಈಗ ಜಾನಪದ ಅಕಾಡೆಮಿ ಅಧ್ಯಕ್ಷೆ ಸ್ಥಾನ ಸಿಕ್ಕಿತು. ಈ ಸಂದರ್ಭದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸ ಇಮ್ಮಡಿಸಿದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel