ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲು ಅಭಿಮಾನಿಗಳು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಗೋಕರ್ಣನಾಥನಿಗೆ 109 ಎಳನೀರು ಅಭಿಷೇಕ ಮತ್ತು ಮಹಾಪೂಜೆ ನಡೆಸಿದ ಜನಾರ್ದನ ಪೂಜಾರಿ ಅಭಿಮಾನಿ ಬಳಗ, ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರನ್ನು ಪ್ರಾರ್ಥಿಸಿದ್ದಾರೆ.
ಇತ್ತೀಚೆಗೆ ಜನಾರ್ದನ ಪೂಜಾರಿ ಮತ್ತು ಅವರ ಪತ್ನಿಗೆ ಪಾಸಿಟಿವ್ ಬಂದಿತ್ತು. ಮನೆ ಕೆಲಸದವರಿಂದ ಜನಾರ್ದನ ಪೂಜಾರಿಗೆ ಸೋಂಕು ಅವರಿಗೆ ಹರಡಿತ್ತು. ಈ ಹಿನ್ನೆಲೆಯಲ್ಲಿ ಪೂಜಾರಿ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್,...








