ಆರೋಗ್ಯದಲ್ಲಿ ಏರುಪೇರು : ಜನಾರ್ದನ ರೆಡ್ಡಿ ಆಸ್ಪತ್ರೆಗೆ ದಾಖಲು
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಆರೋಗ್ಯ ತಪಾಸಣೆ ನಂತರ ಆಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ಯಾವುದೇ ತೊಂದರೆ ಇಲ್ಲ ಎಂದು ತಿಳಿದು ಬಂದಿದ್ದು, ಸಂಜೆ ವೇಳೆಗೆ ಆಸ್ಪತ್ರೆಯಿಂದ ಜನಾರ್ದನ ರೆಡ್ಡಿ ಅವರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗುವ ಸಾಧ್ಯತೆಗಳಿವೆ.