ಜನತಾ ಜಲಧಾರೆ ಸಂಕಲ್ಪ ಯಾತ್ರೆಗೆ ಎಚ್ ಡಿ ಕುಮಾರಸ್ವಾಮಿ ಚಾಲನೆ….
1 min read
ಜನತಾ ಜಲಧಾರೆ ಸಂಕಲ್ಪ ಯಾತ್ರೆಗೆ ಎಚ್ ಡಿ ಕುಮಾರಸ್ವಾಮಿ ಚಾಲನೆ….
ಜೆಡಿಎಸ್ ಪಕ್ಷದಿಂದ ರಾಜ್ಯದ್ಯಾಂತ ಹಮ್ಮಿಕೊಂಡಿರುವ ಜನತಾ ಜಲಧಾರೆ ಸಂಕಲ್ಪ ಯಾತ್ರೆಗೆ ಇಂದು ಚಾಲನೆ ನೀಡಲಾಗಿದೆ. ಶನಿವಾರ ಹನುಮ ಜಯಂತಿಯಂದು ಕೃಷ್ಣಾ ನದಿಯಿಂದ ಕಳಸದಲ್ಲಿ ನೀರು ಸಂಗ್ರಹಿಸಿ ನದಿ ತೀರದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನೂರಾರು ಕುಂಭಗಳೊಂದಿಗೆ ಸಂಕಲ್ಪ ಯಾತ್ರೆಗೆ ಅಧಿಕೃತ ಚಾಲನೆ ನೀಡಲಾಯಿತು.
ಇದಕ್ಕೂ ಮೊದಲು ಯಲಗೂರಿನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೊಂಬೆ ಕುಣಿತ ಡೊಳ್ಳು ಕುಣಿತ ಸರಿದಂತೆ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಗೆ JDS ನಿಂದ ಕೌಂಟರ್ ಪಾದಯಾತ್ರೆ ಎಂದೆ ಇದನ್ನ ಬಿಂಬಿಸಲಾಗಿದೆ. ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಈ ರಥಯಾತ್ರೆ ಸಾಗಲಿದೆ.
ಜನತಾ ಜಲಧಾರೆ ಗಂಗಾ ರಥಯಾತ್ರೆ ಹಿನ್ನೆಲೆಯಲ್ಲಿ ಗೌರಿಬಿದನೂರಿನ, ವಿಧುರಾಶ್ವಥದಲ್ಲಿ ಉತ್ತರ ಪಿನಾಕಿನಿ ನದಿಯಿಂದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೀರು ಸಂಗ್ರಹ ಮಾಡಿದರು.